newsics.com
ಬೆಂಗಳೂರು: ಬೆಂಗಳೂರು ಜನರಿಗೆ ಮತ್ತೊಂದು ದರ ಏರಿಕೆಯ ಶಾಕ್ ಎದುರಲಾಗಲಿದೆ. ಈಗಾಗಲೇ ಹಲವು ಬಾರಿ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್ಸಿಎಲ್ ಪ್ಲಾನ್ ಮಾಡಿತ್ತು, ಏಳು ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿರಲಿಲ್ಲ. ಸದ್ಯ 15 ರಿಂದ 20% ಟಿಕೆಟ್ ದರ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಿಕೆಟ್ ದರ ಏರಿಕೆಗೆ ನಮ್ಮ ಮೆಟ್ರೋ.’ದಿ ಫೇರ್ ಪಿಕ್ಸೇಷನ್ ಕಮಿಟಿ’ (ಎಫ್ಎಫ್ಸಿ) ರಚನೆ ಮಾಡಿದೆ. ಇದೊಂದು ಸ್ವಾತಂತ್ರ ಕಮಿಟಿಯಾಗಿದ್ದು, ಪ್ರಯಾಣಿಕರ ಸಲಹೆ ಪಡೆದು ಟಿಕೆಟ್ ದರ ಏರಿಕೆಗೆ ಈ ಕಮಿಟಿ ಮುಂದಾಗಲಿದ್ದು, ಅ.21 ರೊಳಗೆ ಪ್ರಯಾಣಿಕರು ತಮ್ಮ ಅಭಿಪ್ರಾಯ ತಿಳಿಸಲು ಕಾಲಾವಕಾಶ ನೀಡಲಾಗಿದೆ. ಪ್ರಯಾಣಿಕರ ಸಲಹೆಯನ್ನ[email protected] ಗೆ ಕಳಿಸುವಂತೆ ಸೂಚನೆ ನೀಡಲಾಗಿದೆ.