newsics.com
ನವದೆಹಲಿ: ಸೋನಿಯಾ ಗಾಂಧಿಯವರ ಆತ್ಮಚರಿತ್ರೆಯ ಕೆಲಸಗಳು ಹಲವು ವರ್ಷಗಳಿಂದ ನಡೆಯುತ್ತಿವೆ. ಕೊನೆಗೂ ಇದೀಗ ಅದು ಪ್ರಕಟಣೆಗೆ ಅಣಿಯಾಗಿದೆ. ಆದರೆ, ಆತ್ಮಕಥನದ ಪ್ರಕಟಣೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಹಾರ್ಪರ್‌ಕಾಲಿನ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಂತ್ ಪದ್ಮನಾಭನ್ ಅವರು ಆಂಗ್ಲ ಪತ್ರಿಕೆಯೊಂದಕ್ಕೆ ಈ ವಿಷಯ ತಿಳಿಸಿದ್ದಾರೆ.
ಪೆಂಗ್ವಿನ್ ರಾಂಡಮ್ ಹೌಸ್ ಈ ಆತ್ಮಚರಿತ್ರೆಯ ಪುಸ್ತಕವನ್ನು ಭಾರತದಲ್ಲಿ ಪ್ರಕಟಿಸಬಹುದು ಎಂದು ಮಾಹಿತಿಯ ನೀಡಿದೆ. ಆದರೆ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿಸಲು ನಿರಾಕರಿಸಿದೆ. ಇತರ ವಿವರಗಳನ್ನು ಅಧಿಕೃತ ಪ್ರಕಟಣೆಯೊಂದಿಗೆ ತಿಳಿಸುವುದಾಗಿ ಮಾಹಿತಿ ನೀಡಿದೆ. ಈ ಹಿಂದೆ ಇಂದಿರಾ ಹಾಗೂ ರಾಜೀವ್ ಗಾಂಧಿ ಅವರ ಅಕಾಲಿಕ ಮರಣದಿಂದಾಗಿ ಸಂಪೂರ್ಣವಾಗಿ ಜೀವನ ಚರಿತ್ರೆಯನ್ನು ಬರೆಯಲು ಸಾಧ್ಯವಾಗಲಿಲ್ಲ.
ಇದು ನೆಹರೂ ಕುಟುಂಬದ ಮೊದಲ ಸಮಗ್ರ ಆತ್ಮಚರಿತ್ರೆಯಾಗಿದೆ.