Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > Dasara Special | ಯಶಸ್ಸು ಕರುಣಿಸುವ ಕೂಷ್ಮಾಂಡಾ: ನವರಾತ್ರಿ ನಾಲ್ಕನೇ ದಿನ
ಅನಾವರಣಪ್ರಮುಖ

Dasara Special | ಯಶಸ್ಸು ಕರುಣಿಸುವ ಕೂಷ್ಮಾಂಡಾ: ನವರಾತ್ರಿ ನಾಲ್ಕನೇ ದಿನ

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಸುರಾಸಂಪೂರ್ಣಕಲಶಂ ರುಧಿರಾಪ್ಲುತಮೇವ ಚ|
ದಧಾನಾ ಹಸ್ತಪದ್ಮಭ್ಯಾಂ ಕೂಷ್ಮಾಂಡಾ ಶುಭದಾಸ್ತು ಮೇ ||

ಶರನ್ನವರಾತ್ರಿಯ ನಾಲ್ಕನೇ ದಿನ ದೇವಿಯ ರೂಪವನ್ನು ಕೂಷ್ಮಾಂಡಾ ದೇವಿ ಎಂದು ಕರೆಯಲಾಗುತ್ತದೆ. ಕುತ್ಸಿತಃ ಉಷ್ಮಾಃ ಕೂಷ್ಮಾಃ ಅಂತರ್ಥ. ಕುತ್ಸಿತಃ ಅಂದರೆ ಸಹಿಸುವುದಕ್ಕೆ ಕಠಿಣವಾದದ್ದು. ಇನ್ನು ಉಷ್ಮಾ ಅಂದರೆ ಸೂಕ್ಷ್ಮ ಲಹರಿಗಳ ಗೊಂದಲ (ಶಬ್ದ).

ಮತ್ತೊಂದು ಉಲ್ಲೇಖ ಸಹ ಇದೆ. ತ್ರಿವಿಧತಾಪಯುಕ್ತಃ ಸಂಸಾರಃ ಸ ಅಂಡೇ ಮಾಂಸಪೇಶ್ಯಾಮ್ ಉದರರೂಪಾಯಂ ಯಸಾಃ ಸಾ ಕೂಷ್ಮಾಂಡಾ ಎಂದಿದೆ.

ತ್ರಿವಿಧ ತಾಪ ಅಂದರೆ ಸೃಷ್ಟಿ, ಸ್ಥಿತಿ ಹಾಗೂ ಲಯ. ಇಲ್ಲಿ ಲಯ ಅಂದರೆ ಯಾವುದೇ ನಿಶ್ಚಿತ ಕಾಲ ಎಂಬುದು ಇಲ್ಲದೆ ನಾಶವಾಗುವಂಥದ್ದು. ಈ ಸಂಸಾರ ಅಂದರೆ ಪುನಃ ಪುನಃ ಎಂದಾಗುತ್ತದೆ. ಅಂಡಃ ಎಂಬುದಕ್ಕೆ ವಿಶಿಷ್ಟ ನಿಯಂತ್ರಣದಿಂದ ಯುಕ್ತವಾಗಿರುವ ಕೋಶ.

ಯಾರು ಮಾಂಸ, ಜೀವಕೋಶದಿಂದ ಉದರ ಹಾಗೂ ರೂಪ ಇವುಗಳಿಂದ ಯುಕ್ತ ಸಂಪನ್ನರಾಗಿರುತ್ತಾರೋ ಮೇಲೆ ತಿಳಿಸಿದ ಮೂರು ಬಗೆಯ ತಾಪದಿಂದ ಪುನರಾವೃತ್ತಿಯ ಅವಸ್ಥೆ ಕಾರಣಕ್ಕೆ ಮತ್ತೆ ಮತ್ತೆ ಹೋಗುತ್ತಾರೆ. ಈ ಪ್ರಕ್ರಿಯೆಯಿಂದ ಬಿಡುಗಡೆ ಆಗಬೇಕು ಎಂದುಕೊಳ್ಳುವವರಿಗೆ ಯಾರ ಅನುಗ್ರಹ ಬೇಕೋ ಆಕೆಯೇ ಕೂಷ್ಮಾಂಡಾ.

ಅದೇನೆಂದರೆ, ಜಗಜ್ಜನನಿಯು ತನ್ನ ಮಂದ ಹಾಗೂ ಮಧುರವಾದ ನಗುವಿನಿಂದ ಈ ಅಂಡ, ಅಂದರೆ ಬ್ರಹ್ಮಾಂಡವನ್ನು ಸೃಷ್ಟಿಸುವ ಕಾರಣದಿಂದ ಈಕೆಯನ್ನು ಕೂಷ್ಮಾಂಡಾ ಎನ್ನಲಾಗುತ್ತದೆ. ಸೃಷ್ಟಿಯ ಅಸ್ತಿತ್ವವೇ ಇಲ್ಲದಾಗ ಎಲ್ಲ ಕಡೆಯೂ ಅಂಧಕಾರ ತುಂಬಿತ್ತು. ಆಗ ಇದೇ ದೇವಿಯು ತನ್ನ ಈಶತ್ ಶಕ್ತಿಯಿಂದ ಬ್ರಹ್ಮಾಂಡವನ್ನು ಸೃಷ್ಟಿಸಿದಳು. ಆ ಕಾರಣದಿಂದ ತಾಯಿಯನ್ನು ಆದಿ ಸ್ವರೂಪಾ ಅಥವಾ ಆದಿಶಕ್ತಿ ಎನ್ನಲಾಗುತ್ತದೆ. ಈಕೆಗಿಂತ ಮೊದಲು ಬ್ರಹ್ಮಾಂಡ ಅಸ್ತಿತ್ವದಲ್ಲಿ ಇರಲಿಲ್ಲ.

ಕೂಷ್ಮಾಂಡಾ ದೇವಿಯ ಶರೀರದ ಕಾಂತಿ, ಪ್ರಭೆಯು ಸೂರ್ಯನಷ್ಟು ದೇದೀಪ್ಯಮಾನವಾಗಿ ಇರುತ್ತದೆ. ಆ ತಾಯಿ ಅದೆಷ್ಟು ತೇಜಸ್ಸಿನಿಂದ ಕೂಡಿದ್ದಾಳೆ ಎಂಬುದನ್ನು ಉದಾಹರಿಸುವುದಕ್ಕೆ ಇದೊಂದು ವಿವರಣೆ ಸಾಕು. ತಾಯಿಯ ತೇಜಸ್ಸು ಹಾಗೂ ಪ್ರಕಾಶದಿಂದಲೇ ಹತ್ತು ದಿಕ್ಕುಗಳೂ ಪ್ರಕಾಶಿಸುತ್ತಿವೆ. ಈ ಬ್ರಹ್ಮಾಂಡದ ಎಲ್ಲ ವಸ್ತು, ಪ್ರಾಣಿಗಳಲ್ಲಿ ಇರುವಂಥ ತೇಜಸ್ಸು ಇವಳದೇ ಛಾಯೆ ಆಗಿದೆ.

ಎಂಟು ಭುಜಗಳಿರುವ ಕಾರಣಕ್ಕೆ ಈ ದೇವಿಯನ್ನು ಅಷ್ಟಭುಜಾದೇವಿ ಎಂದು ಆರಾಧಿಸಲಾಗುತ್ತದೆ. ದೇವಿಯ ಏಳು ಕೈಗಳಲ್ಲಿ ಕಮಂಡಲ, ಧನುಸ್ಸು, ಬಾಣ, ಕಮಲ, ಅಮೃತ ತುಂಬಿದ ಕಲಶ, ಚಕ್ರ ಹಾಗೂ ಗದೆ ಇವೆ. ಈಕೆಯ ವಾಹನ ಸಿಂಹವಾಗಿದೆ. ಕೂಷ್ಮಾಂಡಾ ಅಂದರೆ ಸಂಸ್ಕೃತದಲ್ಲಿ ಕುಂಬಳಕಾಯಿ. ಈ ತಾಯಿಗೆ ಕುಂಬಳಕಾಯಿಯನ್ನು ಬಲಿ ನೀಡುವುದೇ ಹೆಚ್ಚು ಪ್ರಿಯ. ಈ ಕಾರಣದಿಂದಲೂ ಕೂಷ್ಮಾಂಡಾ ಎಂಬ ಹೆಸರು ಬಂದಿದೆ.

ನವರಾತ್ರಿಯ ನಾಲ್ಕನೇ ದಿನ ಯಾರು ಕೂಷ್ಮಾಂಡಾ ದೇವಿಯನ್ನು ಆರಾಧಿಸುತ್ತಾರೋ ಅಂಥವರ ಋಣ, ದಾರಿದ್ರ್ಯ, ರೋಗ, ಶೋಕಗಳು ದೂರವಾಗುತ್ತವೆ. ಈ ದೇವಿಯ ಅನುಗ್ರಹದಿಂದ ಆಯುಷ್ಯ, ಯಶಸ್ಸು, ಬಲ ಮತ್ತು ಆರೋಗ್ಯದ ವೃದ್ಧಿ ಆಗುತ್ತದೆ. ಯಥಾಶಕ್ತಿಯಿಂದ ಕೂಷ್ಮಾಂಡಾ ದೇವಿಯನ್ನು ಆರಾಧನೆ ಮಾಡಿದಲ್ಲಿ ಆಕೆ ಒಲಿಯುತ್ತಾಳೆ, ಸಂಸಾರ ಬಂಧದಿಂದ ಮುಕ್ತರಾಗಲು, ವ್ಯಾಧಿ- ಬಾಧೆಗಳಿಂದ ದೂರವಾಗಲು ಅನುಗ್ರಹಿಸುತ್ತಾಳೆ.

ದುರ್ಗೆಯ ಸ್ವರೂಪ ಚಂದ್ರಘಂಟಾ: ನವರಾತ್ರಿ ಮೂರನೇ ದಿನ

Dasara Special | ದ್ವಿತೀಯಂ ಬ್ರಹ್ಮಚಾರಿಣಿ: ನವರಾತ್ರಿ ಎರಡನೇ ದಿನ

ನವರಾತ್ರಿ ಮೊದಲ ದಿನ: ಶೈಲಪುತ್ರಿ ಸ್ವರೂಪ ಆರಾಧನೆ

TAGGED:Dasara Special | Kushmandawhich bestows success: Fourth day of Navratri
Share This Article
Facebook Twitter Copy Link Print
Previous Article ಶೀಘ್ರದಲ್ಲೇ ಸೋನಿಯಾ ಗಾಂಧಿ ಆತ್ಮಕತೆ ಪ್ರಕಟ!
Next Article ಭಾರೀ ಮಳೆಗೆ ಬೆಂಗಳೂರು ತತ್ತರ, ಹಲವೆಡೆ ಅವಾಂತರ, ಜನರ ಪರದಾಟ, ಇಂದೂ ಮಳೆ ಸಾಧ್ಯತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?