newsics.com
ಹೈದ್ರಾಬಾದ್ : ಟಾಲಿವುಡ್ ನ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ತೆಲುಗು ಸೀಸನ್ 7ರ ಸ್ಪರ್ಧಿ ಶುಭಾಶ್ರೀ ರಾಯಗಾರು ಕಾರು ಅಪಘಾತಕ್ಕೀಡಾಗಿದೆ.
ಚಿತ್ರೀಕರಣಕ್ಕೆ ತೆರಳುತ್ತಿದ್ದ ವೇಳೆ ಆ್ಯಕ್ಸಿಡೆಂಟ್ ನಡೆದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಶುಭಾಶ್ರೀ ಕಾರಿಗೆ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.
ಭಾನುವಾರ (ಅಕ್ಟೋಬರ್ 06) ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಗಾರ್ಜುನ ಸಾಗರದ ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ.
ಅಪಘಾತ ಸಂಭವಿಸಿದ ರಭಸಕ್ಕೆ ಆಕೆ ಪ್ರಯಾಣಿಸುತ್ತಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಆದ್ರೆ ಬೈಕ್ ನಲ್ಲಿ ತೆರಳುತ್ತಿದ್ದವರು ಡ್ರಿಂಕ್ ಆ್ಯಂಡ್ ಡ್ರೈವ್ ಮಾಡ್ತಿದ್ದ ಹಿನ್ನಲೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ
ಈ ಅಪಘಾತದಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶುಭಾಶ್ರೀಗೆ ಯಾವುದೇ ಗಾಯವಾಗಿಲ್ಲ ಎಂದು ಹೇಳಲಾಗ್ತಿದೆ.