newsics.com
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ದಿಢೀರ್ ಭೇಟಿಯಾಗಿದ್ದಾರೆ.
ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ಬಿವೈ ವಿಜಯೇಂದ್ರ ಮತ್ತು ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ.
ಮುಡಾ ಹಗರಣ ಪ್ರಕರಣದಲ್ಲಿ ಸಿದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆ, ಮುಖ್ಯಮಂತ್ರಿ ಬದಲಾವಣೆಯ ಕೂಗು ಕೇಳಿಬಂದಿದೆ. ಸಿಎಂ ಕುರ್ಚಿ ಮೇಲೆ ದಲಿತ ನಾಯಕನೇ ಕೂಡಬೇಕೆಂಬ ವಾದ ಜೋರಾದ ಹಿನ್ನೆಲೆಯಲ್ಲಿ ಆಕ್ಟಿವ್ ಆದ ಸತೀಶ್ ಜಾರಕಿಹೊಳಿ ಇತ್ತೀಚಿಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಸದ್ಯ ಇಬ್ಬರು ನಾಯಕರ ಭೇಟಿ ಭಾರಿ ಕುತೂಹಲ ಮೂಡಿಸಿದೆ.