newsics.com
ನವದೆಹಲಿ: ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತ ಕೋರಿದ್ದಾರೆ.
ಭಾರತದೊಂದಿಗಿನ ದ್ವಿಪಕ್ಷೀಯ ಮಾತುಕತೆಗಾಗಿ ಮೊಹಮ್ಮದ್ ಮುಯಿಝು ಮತ್ತು ಮಾಲ್ಡೀವ್ಸ್‌ನ ಸಾಜಿದಾ ಮೊಹಮದ್ ನಿನ್ನೆ ನವದೆಹಲಿಗೆ ಬಂದಿಳಿದಿದ್ದಾರೆ. ಈ ವೇಳೆ ಅವರನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಉನ್ನತ ಮಟ್ಟದ ನಿಯೋಗದೊಂದಿಗೆ ಆತ್ಮೀಯ ಸ್ವಾಗತ ಕೋರಿದರು.