newsics.com
ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರೈತ ನಾಯಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಂಗಳವಾರ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ವಿನಯ್ ಕುಲಕರ್ಣಿ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ರೈತ ನಾಯಕಿಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮೇಲೆ FIR ದಾಖಲಾಗಿದೆ.
ದೂರಿನಲ್ಲಿ ಸಂತ್ರಸ್ತೆ ಶಾಸಕ ವಿನಯ್ ಕುಲಕರ್ಣಿ ಅವರು 2022 ರಿಂದ ನನಗೆ ಪರಿಚಯ. ಆಗಾಗ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ಬಳಸಿಕೊಳ್ಳುತ್ತಿದ್ದರು. ವಿಡಿಯೋ ಕಾಲ್‌ನಲ್ಲಿ ಸಂಪೂರ್ಣ ಬೆತ್ತಲೆಯಾಗಿ ನನ್ನನ್ನು ನೋಡು ಎನ್ನುತ್ತಿದ್ದರು. 2022ರ ಆಗಸ್ಟ್ 24 ರಂದು ಸಂಜೆ 4 ಗಂಟೆಗೆ ಆಟೋದಲ್ಲಿ ಅವರ ಮನೆಗೆ ಹೋಗಿದ್ದೆ.
ಬಳಿಕ ಮನೆಯಿಂದ ಕಾರಿನಲ್ಲಿ ಬಂದ ವಿನಯ್ ಕುಲಕರ್ಣಿ ನನಗೆ ಕುಳಿತುಕೊಳ್ಳುವಂತೆ ಹೇಳಿ, ದೇವನಹಳ್ಳಿ ಸಮೀಪದ ಐವಿಸಿ ರೋಡ್ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋದರು. ಕತ್ತಲೆ ಆದ ನಂತರ ಹಿಂದಿನ ಸೀಟ್‌ನಲ್ಲಿ ನನ್ನ ಹತ್ತಿರ ಕುಳಿತು ಅಸಭ್ಯ ವರ್ತನೆ ತೋರಿದ್ದಲ್ಲದೆ, ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದೂ ತಮ್ಮ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದೀಗ ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸಂಜಯ್ ನಗರ ಪೊಲೀಸ್ ಠಾಣೆಯ ಪೊಲೀಸರು ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ, ಕಿರುಕುಳ, ಜೀವ ಬೆದರಿಕೆ, ವಂಚನೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.
ಐಪಿಸಿ ಸೆಕ್ಷನ್ 506 , 504, ,201, 366, 376, 323, 354 354, ಹಾಗೂ IT ಆ್ಯಕ್ಟ್ ನಡಿ ಪ್ರಕರಣ ದಾಖಲಾಗಿದೆ. ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ದೂರು ನೀಡಿದ ಮಹಿಳೆಯ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.
ಮಹಿಳಾ ಆಯೋಗದಿಂದ ಬಿಗ್ ಬಾಸ್‌ಗೆ ಬಿಗ್ ಶಾಕ್: ಸ್ಪರ್ಧಿಗಳಿಗಿನ್ನು ನರಕದಲ್ಲೂ ಸ್ವರ್ಗ ಸುಖ!