newsics.com
ನವದೆಹಲಿ: ಕಾಂಗ್ರೆಸ್ ಶಾಸಕ,ಮಾಜಿ ಸಚಿವ ಬಿ. ನಾಗೇಂದ್ರ ಅವರೇ ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ “ಮಾಸ್ಟರ್‌ಮೈಂಡ್” ಆಗಿದ್ದು, ಈ ಹಿಂದೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗೆ ರಾಜ್ಯ ಸರ್ಕಾರದ ಸಂಸ್ಥೆಯಿಂದ ಬೇರೆಡೆಗೆ ವರ್ಗಾಯಿಸಲಾದ ಹಣವನ್ನು ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆ ಕೇಂದ್ರ ತನಿಖಾ ಸಂಸ್ಥೆಯೂ ಪ್ರಾಸಿಕ್ಯೂಷನ್ ದೂರು ಅಥವಾ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ ವಿಶೇಷ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್(ಪಿಎಂಎಲ್‌ಎ) ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ತಿಳಿಸಿದೆ.
ನ್ಯಾಯಾಲಯವು 5114 ಪುಟಗಳ ಚಾರ್ಜ್ ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಂಡಿದೆ ಎಂದು ಇಡಿ ಸ್ಪಷ್ಟಪಡಿಸಿದೆ.