newsics.com
ಮುಂಬೈ: ಬುಧವಾರ ರಾತ್ರಿ ಕೊನೆಯುಸಿರೆಳೆದ ಟಾಟಾ ಸನ್ಸ್‌ನ ಅಧ್ಯಕ್ಷ, ಮೇರು ಉದ್ಯಮಿ ರತನ್ ಟಾಟಾ(86) ಅವರ ಅಂತ್ಯಕ್ರಿಯೆ ಮುಂಬೈನ ವರ್ಲಿ ರುದ್ರಭೂಮಿಯಲ್ಲಿ ಗುರುವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ಮಾಹಿತಿ ನೀಡಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ.
https://twitter.com/i/status/1844093982370050382
Reminiscence of Rathan Tata | ಪ್ರತಿ ಭಾರತೀಯನ ಬದುಕಲ್ಲಿ ಹಾಸುಹೊಕ್ಕಾಗಿರುವ ಟಾಟಾ ಬ್ರ್ಯಾಂಡ್