newsics.com
ಬೈರೂತ್: ಇಸ್ರೇಲ್ ಸೇನೆಯು ಸೆಂಟ್ರಲ್ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ ಮೇಲೆ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 22 ಮಂದಿ ಹತ್ಯೆಯಾಗಿದ್ದು, ಸುಮಾರು 117 ಮಂದಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಈ ದಾಳಿಯಲ್ಲಿ ಹಿಜ್ಬುಲ್ಲಾದ ಉನ್ನತ ಅಧಿಕಾರಿಯೊಬ್ಬರು ಬದುಕುಳಿದಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ಹೇಳಿಕೊಂಡಿದೆ.
ಕಳೆದ 1 ವರ್ಷದಲ್ಲಿ ಇಸ್ರೇಲ್ ನಡೆಸಿದ ಮಾರಣಾಂತಿಕ ದಾಳಿಗಳಲ್ಲಿ ಇದು ಒಂದು ಎನ್ನಲಾಗಿದೆ. ದಾಳಿಯಿಂದ ಲೆಬನಾನ್‌ನಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲಕರಿಗೆ ಅಪಾಯವುಂಟಾಗಿದ್ದು, ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸೆಂಟ್ರಲ್ ಬೈರೂತ್‌ನ ವಿಶ್ವಸಂಸ್ಥೆ ಶಾಂತಿಪಾಲನಾ ಪ್ರಧಾನ ಕಚೇರಿ, ಲೆಬನಾನ್ ಸೇನಾ ಟ್ಯಾಂಕರ್‌ಗಳನ್ನ ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದೆ. ಹಿಜ್ಬುಲ್ಲಾ ಮುಖ್ಯಸ್ಥ ನಸ್ರಲ್ಲಾನನ್ನ ಹೊಡೆದುರುಳಿಸಿದ ನಂತರ ಉನ್ನತ ಅಧಿಕಾರಿಗಳ ಸರಣಿ ಹತ್ಯೆಯನ್ನೇ ಹೆಚ್ಚಾಗಿ ಗುರಿಯಾಗಿಸಿದೆ.