Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 1360 ಪ್ರಯಾಣಿಕರನ್ನು ಹೊತ್ತು 75 ಕಿಮೀ ವೇಗದಲ್ಲಿ ಸಾಗುತ್ತಿದ್ದ ದರ್ಭಾಂಗ್ ರೈಲು, 45ಕ್ಕೂ ಹೆಚ್ಚು ಕನ್ನಡಿಗರಿಗೆ ಸಂಕಷ್ಟ
ದೇಶಪ್ರಮುಖ

1360 ಪ್ರಯಾಣಿಕರನ್ನು ಹೊತ್ತು 75 ಕಿಮೀ ವೇಗದಲ್ಲಿ ಸಾಗುತ್ತಿದ್ದ ದರ್ಭಾಂಗ್ ರೈಲು, 45ಕ್ಕೂ ಹೆಚ್ಚು ಕನ್ನಡಿಗರಿಗೆ ಸಂಕಷ್ಟ

Share
2 Min Read
SHARE

newsics.com

ಚೆನ್ನೈ: ಮೈಸೂರು ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್‌ ರೈಲು ತಮಿಳುನಾಡಿನ ತಿರುವಳ್ಳುವರ್‌ ಗುಮ್ಮುಡಿಪೂಂಡಿಯಲ್ಲಿ ಶುಕ್ರವಾರ ರಾತ್ರಿ 8.30ರ ಸಮಯದಲ್ಲಿ ಗೂಡ್ಸ್ ರೈಲಿಗೆ ಗುದ್ದಿದ ಪರಿಣಾಮ 13 ರೈಲು ಬೋಗಿಗಳು ಹಳಿ ತಪ್ಪಿದ್ದು, ಮೂರು‌ ಬೋಗಿಗಳು ಸಂಪೂರ್ಣವಾಗಿ ಸುಟ್ಟಿವೆ.

ಕವರಪೆಟ್ಟೈ ಎಂಬ ಸ್ಥಳದಲ್ಲಿ ಈ ದುರ್ಘಟನೆ ನಡೆದಿದ್ದು, ಅಪಘಾತಕ್ಕೀಡಾಗುವ ವೇಳೆ ರೈಲು ಗಂಟೆಗೆ 75 ಕಿ.ಮೀ. ವೇಗದಲ್ಲಿ ಚಲಿಸುತ್ತಿತ್ತು ಎಂದು ದಕ್ಷಿಣ ರೈಲ್ವೆ ತಿಳಿಸಿದೆ.

ತಮಿಳುನಾಡು ಸರ್ಕಾರದ ಮಾಹಿತಿಯಂತೆ, 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಇದರಲ್ಲಿ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನೆಲ್ಲ ಚೆನ್ನೈನ ಸ್ಟಾನ್ಲಿ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯವಾದವರನ್ನು ಪೊನ್ನೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳೀಯರು ಕೂಡ ಸಹಾಯಹಸ್ತ ಚಾಚಿದ್ದು, ನೀರು, ಆಹಾರ ಪೂರೈಕೆ ಮಾಡುತ್ತಿದ್ದಾರೆ. ಉಳಿದುಕೊಳ್ಳಲು ಸಹಾಯ ಮಾಡುತ್ತಿದ್ದಾರೆ. ಸುಮಾರು 45ಕ್ಕೂ ಹೆಚ್ಚು ಕನ್ನಡಿಗರು ಈ ಘಟನೆಯಲ್ಲಿ ಸಿಲುಕಿದ್ದಾರೆಂದು ವರದಿ ತಿಳಿಸಿದೆ.

ದೆಹಲಿಯ ರೈಲ್ವೆ ವಾರ್ ರೂಂನಿಂದ ತಮಿಳುನಾಡು ರೈಲು ಅಪಘಾತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳೆದೊಯ್ಯವಂತೆ ಸಂಬಂಧಿಸಿದವರಿಗೆ ಮಾಹಿತಿ ನೀಡಿದ್ದಾರೆ.

ರೈಲು ದುರಂತದ ಪರಿಣಾಮ ತಿರುಚಿರಾಪಳ್ಳಿ-ಹೌರಾ ಎಕ್ಸ್‌ಪ್ರೆಸ್, ಎರ್ನಾಕುಲಂ-ಟಾಟಾನಗರ ಎಕ್ಸ್‌ಪ್ರೆಸ್, ಮತ್ತು ಕಾಕಿನಾಡ-ಧನ್‌ಬಾದ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಅಡ್ಡಿಯಾಗಿದ್ದು, ಈ ರೈಲುಗಳ ಮಾರ್ಗಗಳ ಬದಲಾವಣೆಯಾಗುವ ಸಾಧ್ಯತೆ ಇದೆ.

ಮೈಸೂರಿನಿಂದ ಹೊರಡುವ ಬಿಹಾರದ ದರ್ಭಾಂಗ 8 ರಾಜ್ಯಗಳನ್ನು ಹಾದು ಹೋಗುವ ರೈಲು ಇದಾಗಿದೆ. ಸುಮಾರು 1360 ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದರು ಎಂದು
ತಿರುವಳ್ಳೂರು ಜಿಲ್ಲಾಧಿಕಾರಿ ಡಾ.ಟಿ.ಪ್ರಭುಶಂಕರ್ ಮಾಹಿತಿ ನೀಡಿದ್ದಾರೆ. ಸಿಗ್ನಲ್ ಸಮಸ್ಯೆಯೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

ಮೈಸೂರಿನಿಂದ ಬೆಳಗ್ಗೆ 10.30ರ ಸಮಯದಲ್ಲಿ ಈ ರೈಲು ಹೊರಟಿತ್ತು. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ ಮೂಲಕ ಬಿಹಾರ ತಲುಪಲಿದೆ. ಈ ರೈಲು 3035 ಕಿಮೀ ಪ್ರಯಾಣ ಮಾಡಲಿದೆ. ಲೂಪ್‌ ಲೈನ್‌ನಲ್ಲಿ ಟ್ರೈನ್ ಹೋಗಿದ್ದೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಮೈಸೂರು- ದರ್ಭಾಂಗ್ ರೈಲು ಡಿಕ್ಕಿ: ಎರಡು ಬೋಗಿಗೆ ಬೆಂಕಿ,‌ ಹಲವರಿಗೆ ಗಾಯ, ವಿಡಿಯೋ ನೋಡಿ

ರಾಜ್ಯದ ಪಿಜಿ, ಹಾಸ್ಟೆಲ್‌ಗಳಲ್ಲಿರುವವರಲ್ಲಿ ಎಚ್‌ಐವಿ ಸೋಂಕು, ಹೆಚ್ಚಿದ ಆತಂಕ

‘ಬಯಕೆ’ ಈಡೇರಿಕೆಗೆ ಮಹಿಳೆಯರಿಗೆ ರೋಬೋಟ್‌ಗಳೇ ಹೆಚ್ಚು ಇಷ್ಟವಂತೆ! ಸಡಿಲವಾಗಲಿದ್ಯಾ ಮಹಿಳೆ- ಪುರುಷರ ನಡುವಿನ ಬಂಧ?

ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿದ ಸರ್ಕಾರ,‌ ಖಾಸಗಿ ಕಂಪನಿಗಳಿಗೂ ಅನ್ವಯ

TAGGED:#Darbhang #train #1360 passengers #Kannadigas #chennai #mysore #railway #tamilnadu
Share This Article
Facebook Twitter Copy Link Print
Previous Article ‘ಬಯಕೆ’ ಈಡೇರಿಕೆಗೆ ಮಹಿಳೆಯರಿಗೆ ರೋಬೋಟ್‌ಗಳೇ ಹೆಚ್ಚು ಇಷ್ಟವಂತೆ! ಸಡಿಲವಾಗಲಿದ್ಯಾ ಮಹಿಳೆ- ಪುರುಷರ ನಡುವಿನ ಬಂಧ?
Next Article ವಿಶ್ವವಿಖ್ಯಾತ ಮೈಸೂರು ಜಂಬೂಸವಾರಿ ಇಂದು, ಏನೇನು ಕಾರ್ಯಕ್ರಮ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?