newsics.com
ದಿಸ್ಪುರ್: ವಿಚಾರಣಾಧೀನ ಐವರು ಕೈದಿಗಳು ಜೈಲಿನ ಕಂಬಿಗಳನ್ನು ಮುರಿದು ಕಾಂಪೌಂಡ್‌ನ್ನು ಇಳಿದು ಪರಾರಿಯಾದ ಘಟನೆ ಅಸ್ಸಾಂನಲ್ಲಿ ನಡೆದಿದೆ.
ಬೆಡ್‌ಶೀಟ್‌ಗಳು ಮತ್ತು ಲುಂಗಿಗಳನ್ನು ಬಳಸಿ 20 ಅಡಿ ದಾಟಿ ಪರಾರಿಯಾಗಿದ್ದಾರೆ. ಜೈಲಿಂದ ತಪ್ಪಿಸಿಕೊಂಡ ಕೈದಿಗಳನ್ನು ಸೈಫುದ್ದೀನ್, ಜಿಯಾರುಲ್ ಇಸ್ಲಾಂ, ನೂರ್ ಇಸ್ಲಾಂ, ಮಫಿದುಲ್ ಮತ್ತು ಅಬ್ದುಲ್ ರಶೀದ್ ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ 1 ರಿಂದ 2 ಗಂಟೆಯ ವೇಲೆ ಮೋರಿಗಾಂವ್ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದಾರೆ. ಬ್ಯಾರಕ್‌ಗಳ ರಾಡ್‌ಗಳನ್ನು ಮುರಿದು ಬಳಿಕ 20 ಅಡಿ ಕಾಂಪೌಂಡ್ ಇಳಿಯಲು ಕಂಬಳಿ, ಲುಂಗಿ ಮತ್ತು ಬೆಡ್‌ಶೀಟ್‌ಗಳನ್ನು ಬಳಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಐವರು POCSO ಪ್ರಕರಣದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದರು. ಪರಾರಿಯಾದವರ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.