newsics.com
ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹೆಚ್ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸುರೇಶ್ ಬಾಬು ವಿರುದ್ದ ಬೆದರಿಕೆ ಆರೋಪದಡಿ ದೂರು ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ದೂರು ಆಧರಿಸಿ ಎನ್ಸಿಆರ್ ದಾಖಲಾಗಿದೆ.
ಸೆ.28 ಹಾಗೂ ಸೆ.29ರಂದು ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ದೂರಿದ್ದಾರೆ. ತನ್ನ ವಿರುದ್ಧ ಸುಳ್ಳು ಆರೋಗ್ಯ ಪ್ರಮಾಣ ಪಡೆದ ಆರೋಪ ಮಾಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಆರೋಪದ ಅಡಿ ದೂರು ದಾಖಲಿಸಲಾಗಿದೆ