newsics.com
ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದ್ದು, ಈ ಸಂಬಂಧ ಕೆಲವು ದೂರುಗಳನ್ನು ಸ್ವೀಕರಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯ ಆಯುಕ್ತರ ಭಾವಚಿತ್ರ, ಹೆಸರು, ಹುದ್ದೆ ಮತ್ತು ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಫೇಸ್ ಬುಕ್ ಖಾತೆ (https://www.facebook.com/share/72znq6cB8NENELpo/) ತೆರೆಯಲಾಗಿದೆ.
ನಕಲಿ ಫೇಸ್‌ಬುಕ್ ಖಾತೆ ಮೂಲಕ ಪಾಲಿಕೆಯ ಅಧಿಕಾರಿಗಳು, ನೌಕರರು ಹಾಗೂ ಸಾರ್ವಜನಿಕರನ್ನು ವಂಚಿಸುವ ಸಾಧ್ಯತೆಯಿದ್ದು, ಸದರಿ ಫೇಸ್‌ಬುಕ್ ಖಾತೆಯನ್ನು ಡಿಲೀಟ್ ಮಾಡಿ, ಖಾತೆ ತೆರೆದಿರುವ ಅಪರಿಚಿತರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ದೂರು ನೀಡಲಾಗುವುದು ಎಂದು ಪಾಲಿಕೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.