newsics.com
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಯ ಕುರಿತು ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದಾರೆ, ಸುಫಾರಿ ಹತ್ಯೆ, ಉದ್ಯಮ ವೈಷಮ್ಯ ಅಥವಾ ಕೊಳೆಗೇರಿ ಪುನರ್ವಸತಿ ಯೋಜನೆಗೆ ಸಂಬಂಧಿಸಿದಂತೆ ಬೆದರಿಕೆಯೇ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಮುಂಬೈನಲ್ಲಿ ನಿನ್ನೆ ಶನಿವಾರ ರಾತ್ರಿ ಮೂವರು ದುಷ್ಕರ್ಮಿಗಳ ಗುಂಡಿಗೆ ಎನ್‌ಸಿಪಿ ನಾಯಕ ಸಿದ್ದಿಕ್ ಬಲಿಯಾಗಿದ್ದಾರೆ. ಸದ್ಯ ಈ ಆಘಾತಕಾರಿ ಘಟನೆಯು ಮುಂದಿನ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರತಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ
ಬಾಬಾ ಸಿದ್ದಿಕ್ ಬಾಂದ್ರಾ (ಪಶ್ಚಿಮ) ಕ್ಷೇತ್ರವನ್ನು ಮೂರು ಬಾರಿ ವಿಧಾನಸಭೆಯಲ್ಲಿ ಪ್ರತಿನಿಧಿಸಿದ್ದರು. ಮುಂಬೈನ ಪ್ರಮುಖ ಮುಸ್ಲಿಂ ನಾಯಕ, ಸಿದ್ದಿಕ್ ಹಲವಾರು ಬಾಲಿವುಡ್ ತಾರೆಗಳಿಗೆ ಹತ್ತಿರವಾಗಿದ್ದರು.