newsics.com
ಒಂದೇ ಕುಟುಂಬದ ಮೂವರ ಶವ ಪತ್ತೆಯಾಗಿದ್ದು, ವಾಮಾಚಾರದ ಶಂಕೆ ವ್ಯಕ್ತವಾಗಿರುವ ಘಟನೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ಹೌದು, ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ವಾಮಾಚಾರದ ಶಂಕೆ ವ್ಯಕ್ತವಾಗಿದೆ. ಅಕ್ಟೋಬರ್ 10ರಂದು ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ದುಗ್ಲು ಪೂರ್ಣಿ (57), ಪತ್ನಿ ಸುಕ್ಬರೋ ಪೂರ್ಣಿ (48) ಮತ್ತು ಅವರ ಮಗಳು ದಸ್ಕಿರ್ ಪೂರ್ಣಿ (24) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಇನ್ನು ಇವರ ದೇಹಗಳು ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ತಲೆ ಮತ್ತು ಕುತ್ತಿಗೆಯ ಮೇಲೆ ಗಾಯಗಳಾಗಿವೆ. ವಾಮಾಚಾರದ ಅನುಮಾನದ ಆಧಾರದ ಮೇಲೆ ಕುಟುಂಬದವರ ಬಳಿ ಮಾಹಿತಿ ಪಡೆಯುತ್ತಿದ್ದಾರೆ.
ಖಚಿತ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿ ಶವಗಳನ್ನು ಅರಣ್ಯದಿಂದ ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.