newsics.com
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಸೋಮವಾರ ಬೆಳಗಿನ ಜಾವ ಬೆಂಗಳೂರು ಸೇರಿ ವಿವಿಧೆಡೆ ಮಳೆ ಸುರಿದಿದೆ.
ಮಂಗವಾರದಿಂದ(ಅ.15) ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಒಳನಾಡು ಭಾಗದಲ್ಲಿ ಬುಧವಾರದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಂಗಳವಾರದಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಕ್ಟೋಬರ್ 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದೇಹದ ಮೇಲೆಯೇ ಘಟ ಸ್ಥಾಪನೆ: ಅನ್ನ, ನೀರು ತ್ಯಜಿಸಿ ಅಂಬಾಭವಾನಿ ಭಕ್ತನ ಮೌನ ವ್ರತ
ವಿಮಾನ ಪ್ರಯಾಣಿಕರಿಗೆ ಸಂತಸದ ಸುದ್ದಿ.. ಟಿಕೆಟ್ ದರದಲ್ಲಿ ಭಾರೀ ಇಳಿಕೆ..!
ಅಕ್ಕನ ಬಳಿ ಬಂದ್ರೆ ತಂಗಿನೂ ಫ್ರೀ : ಇಬ್ಬರಿಗೂ ಒಬ್ಬನೇ ಬಾಯ್ಫ್ರೆಂಡ್ ಬೇಕಂತೆ…
ಓವಿಯಾ ಖಾಸಗಿ ವಿಡಿಯೋ ಲೀಕ್? ನೋಡಿ ‘ಎಂಜಾಯ್’ ಮಾಡು ಎಂದಿದ್ಯಾಕೆ ಕಿರಾತಕ ನಟಿ!