newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮತ್ತು ಪವಿತ್ರಗೌಡಗೆ ಇಂದು ಮತ್ತೆ ಜೈಲಾ? ಬೆಲಾ? ಅನ್ನೋದು ನಿರ್ಧಾರವಾಗಲಿದೆ.
ಹೌದು, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ದರ್ಶನ್, ಪವಿತ್ರಾಗೌಡ ಸೇರಿ ದಂತೆ 6 ಆರೋಪಿಗಳ ಜಾಮೀನು ಭವಿಷ್ಯ ಇಂದು ಹೊರಬಿಳಲಿದೆ. ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡನೆ ಮಾಡಿದ್ದು ಪ್ರಕರಣದಲ್ಲಿ ದರ್ಶನ್ ಬಗ್ಗೆ ಪೂರಕವಾದ ಸಾಕ್ಷ್ಯಗಳು ಇಲ್ಲ. ಹಾಗಾಗಿ ದರ್ಶನ್‌ಗೆ ಜಾಮೀನು ಮಂಜೂರು ಮಾಡಬಹುದೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಆದರೆ ಎಸ್‌ಪಿಪಿ ಪ್ರಸನ್ನ ಕುಮಾರ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ನೇರವಾಗಿ ಭಾಗಿಯಾಗಿದ್ದಾರೆ ಅನ್ನೋದಕ್ಕೆ ಹಲವು ಟೆಕ್ನಿಕಲ್ ಎವಿಡೆನ್ಸ್, ಸಿಸಿಟಿವಿ ದೃಶ್ಯಾವಳಿಗಳಿವೆ. ಎಫ್‌ಎಸ್‌ಎಲ್‌ನಲ್ಲಿ ದರ್ಶನ್ ಘಟನಾ ಸ್ಥಳದಲ್ಲಿ ಇದ್ದಿದ್ದರ ಸಾಕ್ಷ್ಯಗಳು ಲಭ್ಯವಾಗಿದೆ.
ಇನ್ನು ಆರೋಪಿ ದರ್ಶನ್ ಗೆ ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡದಂತೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ನ್ಯಾಯಾದೀಶರು ಆದೇಶ ಕಾಯ್ದರಿಸಿದ್ದರು ಸೋಮವಾರ ಜಾಮೀನು ಆದೇಶ ಹೊರ ಬಿಳುವುದಿಂದ ಎಲ್ಲರ ಚಿತ್ತ ಕೋರ್ಟ್ ಆದೇಶದತ್ತ ನೆಟ್ಟಿದೆ.