newsics.com
ಬೆಂಗಳೂರು: ನಟ ದರ್ಶನ್ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ.
ರೇಣುಕಾಸ್ವಮಿ ಕೊಲೆ ಪ್ರಕರಣದಲ್ಲಿ ಜೂನ್ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಸದ್ಯ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಪ್ರಸನ್ನಕುಮಾರ್ ಅವರು ವಾದ ಮಂಡಿಸಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು. ದರ್ಶನ್ ಸೇರಿ ನಾಲ್ವರಿಗೆ ಜಾಮೀನು ಮಂಜೂರು ಮಾಡದಂತೆ ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಿದ್ದರು.
ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಕೋರ್ಟ್ ಆದೇಶ ಪ್ರಕಟಿಸಿದೆ. ಎ1 ಪವಿತ್ರಾ ಗೌಡ ಮತ್ತು ಎ2 ದರ್ಶನ್ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ತೀರ್ಪು ನೀಡಿದೆ. ಜೊತೆಗೆ ಎ11 ನಾಗರಾಜ್, ಎ12 ಲಕ್ಷ್ಮಣ್ ಜಾಮೀನು ಅರ್ಜಿ ಸಹ ವಜಾ ಆಗಿದೆ. ಎ8 ರವಿಶಂಕರ್ ಹಾಗೂ ಎ13 ದೀಪಕ್‌ಗೆ ಕೋರ್ಟ್ ಜಾಮೀನು ನೀಡಲು ಒಪ್ಪಿದೆ. ಸದ್ಯ ಬೇಲ್ ಅದೇಶ ಹೊರಬಿದ್ದಿದ್ದು, ದರ್ಶನ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ದರ್ಶನ್ ಗೆ ಜೈಲೇ ಗತಿ ಆಗಿದೆ.
ಪ್ರಾಂಶುಪಾಲರಿಂದ ಕಿರುಕುಳ ಆರೋಪ: ಕಾಲೇಜಿನಲ್ಲೇ ಮಹಿಳಾ ಪ್ರೊಫೆಸರ್ ಆತ್ಮಹತ್ಯೆ ಯತ್ನ