newsics.com
ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
ಹೌದು, ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಮುನಿರತ್ನ ಹೊರತು ಪಡಿಸಿ ಉಳಿದವರ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆರೋಪಿಗಳಾದ ಲೋಹಿತ್, ಕಿರಣ್ ಮತ್ತು ಮಂಜುನಾಥ್ ಈ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಬೆಳಗ್ಗಿನ ಉಪಹಾರ ಸೇವಿಸದೆ ಟೆನ್ಷನ್ನಲ್ಲಿ ಕುಳಿತ ದರ್ಶನ್; ಸಿಬ್ಬಂದಿ ಮುಂದೆ ಇಟ್ಟ ಬೇಡಿಕೆ ಏನು..?