newsics.com
ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿದೆ. ಇನ್ನು ಮುಂದೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಓಪನ್ ಮಾಡಲಾಗಿದೆ
ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಬಿಬಿಎಂಪಿ(BBMP) ಜೊತೆ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು ‘ ಇನ್ನು ಮುಂದೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಓಪನ್ ಮಾಡಲಾಗಿದೆ. ಸಿಎಸ್ ಸೂಚನೆ ಹಿನ್ನೆಲೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಛೇರಿಯಲ್ಲಿ 1 ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರು ಸಮಸ್ಯೆಗಳಿದ್ದರೆ, ಸಾರ್ವಜನಿಕರು ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಸದರಿ ದೂರಗಳನ್ನು ಸಂಬಂಧಪಟ್ಟ ವಲಯ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದೆ.