newsics.com
ಮುಂಬೈ: 14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಮುಂಬೈನ ಲೋಖಂಡವಾಲಾ ಕಾಂಪ್ಲೆಕ್ಸ್ನಲ್ಲಿ ನಡೆದಿದೆ.
ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42)ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ನ 4ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 14ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ
ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.