newsics.com
ನವದೆಹಲಿ: ಕೊನೆಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಕಾಲಿಟ್ಟಿದ್ದಾರೆ. ಅಣ್ಣ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ವಯನಾಡ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ಹೆಸರು ಘೋಷಣೆಯಾಗಿದೆ.
ಕೇಂದ್ರ ಚುನಾವಣಾ ಆಯೋಗ ವಯನಾಡ್ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಅವರ ಹೆಸರನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಬಗ್ಗೆ ಎಐಸಿಸಿ ಜನರಲ್ ಸೆಕ್ರೆಟರಿ ವೇಣುಗೋಪಾಲ್ ಅವರು ಅಧಿಕೃತ ಪ್ರಕಟಣೆ ನೀಡಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಹಾಗೂ ರಾಯ್ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಅವರು 2 ಕಡೆ ಗೆಲುವು ಸಾಧಿಸಿದ್ದರು. ಎರಡು ಕ್ಷೇತ್ರ ಗೆದ್ದ ರಾಹುಲ್ ಗಾಂಧಿ ರಾಯ್ಬರೇಲಿ ಕ್ಷೇತ್ರವನ್ನ ಉಳಿಸಿಕೊಂಡು ವಯನಾಡ್‌ಗೆ ರಾಜೀನಾಮೆ ನೀಡಿದ್ದರು. ಅಣ್ಣ ರಾಹುಲ್ ಗಾಂಧಿ ಸ್ಥಾನಕ್ಕೆ ತಂಗಿ ಪ್ರಿಯಾಂಕಾ ಗಾಂಧಿ ಎಂಟ್ರಿ ಆಗಿದ್ದಾರೆ.