newsics.com
ಛತ್ತೀಸ್‌ಗಢ: ಮಾವೋವಾದಿಗಳು ಅಳವಡಿಸಿದ್ದ IED ಸ್ಫೋಟಗೊಂಡ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಪೊಲೀಸ್ ಗಾಯಗೊಂಡ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.
ಐಟಿಬಿಪಿ, BSF ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ ತಂಡಗಳು ಧುರ್ಬೇಡದಲ್ಲಿ ಕಾರ್ಯಾಚರಣೆ ನಡೆಸಿ ನಾರಾಯಣಪುರಕ್ಕೆ ಹಿಂತಿರುಗುತ್ತಿದ್ದಾಗ ಅಬುಜ್‌ಮಾದ್ ಪ್ರದೇಶದ ಕೊಡ್ಲಿಯಾರ್ ಗ್ರಾಮದ ಬಳಿ ಮಾವೋವಾದಿಗಳು ಅಳವಡಿಸಿದ್ದ ಐಇಡಿ ಸ್ಫೋಟಗೊಂಡಿದೆ.
ಅಮರ್ ಪನ್ವಾರ್ ಮತ್ತು ಕೆ ರಾಜೇಶ್ ಮೃತ ಯೋಧರು ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಇಬ್ಬರು ಪೊಲೀಸ್ ಸಿಬ್ಬಂದಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.