newsics.com
ಬೆಂಗಳೂರು: ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದಲೇ ಗುಡುಗು ಸಹಿತ ಮಳೆಯ ಅಬ್ಬರ ಜೋರಾಗಿದೆ. ಅಕ್ಟೋಬರ್ 26ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ನಗರ,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ, ಎಚ್ಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.