newsics.com
ಜೈಪುರ: ಬಸ್ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿ ಎಂಟು ಮಕ್ಕಳು ಸೇರಿದಂತೆ 12 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ಪುರದಲ್ಲಿ ನಡೆದಿದೆ.
ಮೃತರನ್ನು ಇರ್ಫಾನ್ (38), ಜೂಲಿ (34), ಪುತ್ರಿ ಅಸ್ಮಾ (14), ಸಲ್ಮಾನ್ (8), ಪರ್ವೀನ್ (32), ಜರೀನಾ (35), ಸಾಕಿರ್ (6), ಸಾನಿ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಕರೌಲಿ-ಧೋಲ್ಪುರ್ ಹೆದ್ದಾರಿ ಎನ್‌ಹೆಚ್‌ಬಿಯ ಸುನಿಪುರ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಮೃತರಲ್ಲಿ 8 ಮಕ್ಕಳಿದ್ದಾರೆ, ಅವರಲ್ಲಿ ಐವರು ಗಂಡು ಮಕ್ಕಳು, ಮೂವರು ಬಾಲಕಿಯರು, ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
.