newsics.com
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್ನ ಕಮಾಂಡ್ ಸೆಂಟರ್‌ಗೆ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಿರುವಂತಹ ಘಟನೆ ನಡೆದಿದೆ.
6 ವಿಮಾನಗಳಲ್ಲಿ ಇಬ್ಬರು ಒಟ್ಟು 12 ಬಾಂಬರ್‌ಗಳಿರುವುದಾಗಿ ಅನಾಮಧೇಯ ಟ್ವಿಟರ್ ಖಾತೆಯಿಂದ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.
ಹುಸಿ ಬಾಂಬ್ ಬೆದರಿಕೆ ಮೆಸೇಜ್ ಮಾಡಿದವರ ವಿರುದ್ಧ ಕೆಂಪೇಗೌಡ ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆದರಿಕೆ ಮೆಸೇಜ್ ಹಿನ್ನೆಲೆ ಏರ್‌ಪೋರ್ಟ್ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಕಳೆದ ಒಂದು ವಾರದಲ್ಲಿ ಎರಡನೇ ಸಲ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್ಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ.