newsics.com
ಬೆಂಗಳೂರು : ನಂದಿನಿ ಹಾಲಷ್ಟೇ ಅಲ್ಲ, ನಂದಿನಿ ಬ್ರ್ಯಾಂಡ್‌ನ ರೆಡಿ ಟು ಕುಕ್ ದೋಸೆ ಮತ್ತು ಇಡ್ಲಿ ಹಿಟ್ಟು ಕೂಡ ಸಿಗಲಿದೆ.
ರೆಡಿ ಟು ಕುಕ್ ಮಾದರಿ ಹೆಚ್ಚು ಜನಪ್ರಿಯವಾಗುತ್ತಿದ್ದು, ಐಡಿ, ಅಸಲ್, ಎಂಟಿಆರ್ ಮುಂತಾದ ಕಂಪನಿಗಳ ದೋಸೆ, ಇಡ್ಲಿ ಹಿಟ್ಟುಗಳು ಈಗಾಗಲೇ ಚಾಲ್ತಿಯಲ್ಲಿವೆ. ಇವುಗಳಿಗೆ ಪೈಪೋಟಿ ನೀಡಲು ಕೆಎಂಎಫ್ ನಿರ್ಧರಿಸಿದ್ದು, ಶೀಘ್ರದಲ್ಲೇ ನಂದಿನಿ ಬ್ರಾಂಡ್‌ನ ರೆಡಿ ಟು ಕುಕ್ ದೋಸೆ ಮತ್ತು ಇಡ್ಲಿ ಹಿಟ್ಟನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಡ್ಲಿ ಮತ್ತು ದೋಸೆಗೆ ಅಪಾರ ಬೇಡಿಕೆಯನ್ನು ಮನಗಂಡಿರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಇಡ್ಲಿ ಮತ್ತು ದೋಸೆ ಹಿಟ್ಟು ಉತ್ಪನ್ನ ಮಾರಾಟಕ್ಕೆ ಸಿದ್ಧತೆ ನಡೆಸಿದೆ.