newsics.com
ಮೈಸೂರು: ಮೈಸೂರಿನ ಮುಡಾ ಕಚೇರಿ ಮೇಲೆ ಶುಕ್ರವಾರ ದಿಢೀರ್ ದಾಳಿ ನಡೆಸಿದ್ದ ಜಾರಿನಿರ್ದೇಶನಾಲಯದ ಅಧಿಕಾರಿಗಳು ಸತತ 2 ದಿನಗಳ ಕಾಲ ಪರಿಶೀಲನೆ ನಡೆಸಿ, 800 ಪುಟಗಳ ಪೇಪರ್ಗಳು, ಹಾರ್ಡ್ ಡಿಸ್ಕ್ ಅನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಸುಮಾರು 8 ಅಧಿಕಾರಿಗಳ ಜಾರಿನಿರ್ದೇಶನಾಲಯ ತಂಡ ಮೈಸೂರಿನ ಮುಡಾ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಒಳಗೊಂಡ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) 800 ಪುಟಗಳ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್ ಅನ್ನು ವಶಪಡಿಸಿಕೊಂಡಿದ್ದಾರೆ.
ಭಾನುವಾರ ಬೆಳಗಿನ ಜಾವ 2.30ರವರೆಗೆ ಅಧಿಕಾರಿಗಳು ಶೋಧ ನಡೆಸಿ 50:50 ಅನುಪಾತದಡಿ ಹಂಚಿಕೆ ಮಾಡಿರುವ ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ