newsics.com
ಬೆಂಗಳೂರು: ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಲಿದ್ದಾರೆ.
ಸೋಮವಾರ ಸಂಜೆ ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ. ಅದರೊಂದಿಗೆ ಚನ್ನಪಟ್ಟಣ ಉಪಚುನಾವಣೆ ಅಖಾಡ ಇನ್ನಷ್ಟು ಕುತೂಹಲ ಹೆಚ್ಚಿಸಿದೆ.
ರಾಜೀನಾಮೆ ಮೂಲಕ ಚನ್ನಪಟ್ಟಣದಲ್ಲಿ ಸಿಪಿವೈ ಸ್ವತಂತ್ರ ಸ್ಪರ್ಧೆ ಬಹುತೇಕ ಖಚಿತವಾದಂತಾಗಿದೆ. ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣಕ್ಕಾಗಿ ಸಿಪಿವೈ ರೊಚ್ಚಿಗೆದ್ದಿದ್ದು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡಲು ಸಭಾಪತಿ ಹೊರಟ್ಟಿ ಅವರ ಭೇಟಿಗೆ ತೆರಳಿದ್ದಾರೆ.
‘ಎನ್‌ಡಿಎ ಅಭ್ಯರ್ಥಿಯಾಗಿ ಚುನಾವಣೆಗೆ ಕಣಕ್ಕಿಳಿಯುವ ಸಾಧ್ಯತೆ ಬಹಳ ಕ್ಷೀಣಿಸುತ್ತಿದೆ. ಜೆಡಿಎಸ್ ಹಾಗೂ ನಾವು ಒಟ್ಟಿಗೆ ಚುನಾವಣೆ ಮಾಡಬೇಕು. ನನಗೆ ಮೊದಲಿನಿಂದಲೂ ಬಿಜೆಪಿಯಿಂದ ಕಣಕ್ಕಿಳಿಯಬೇಕು ಎನ್ನುವುದು ಆಶಯ. ಜೆಡಿಎಸ್‌ನಿಂದ ನಿಂತುಕೊಳ್ಳುವಂತೆ ಮಾತನಾಡಿದ್ದಾರೆ. ಆದರೆ, ಜೆಡಿಎಸ್ ಟಿಕೆಟ್‌ನಲ್ಲಿ ಹೋರಾಟ ಮಾಡಲು ನಮ್ಮ ಕಾರ್ಯಕರ್ತರು ಕೂಡ ಒಪ್ಪುತ್ತಿಲ್ಲ. ಬಹಳ ಸಾರಿ ಚಿಹ್ನೆ ಬದಲಾಯಿಸಿದ್ದು, ಪಕ್ಷಾಂತರ ಮಾಡಿದ್ದು ಆಗಿದೆ..’ ಎಂದು ಹೇಳಿದ್ದಾರೆ. ವೈಯಕ್ತಿಕವಾಗಿ ನನಗೆ ಯಾವುದೇ ಟಿಕೆಟ್‌ನಿಂದ ಸ್ಪರ್ಧೆ ಮಾಡೋಕೆ ಹಿಂಜರಿಕೆಯಿಲ್ಲ. ಆದರೆ, ಜೆಡಿಎಸ್ ಟಿಕೆಟ್‌ನಿಂದ ಸ್ಪರ್ಧೆ ಮಾಡೋಕೆ ಕಾರ್ಯಕರ್ತರು ಒಪ್ಪುತ್ತಿಲ್ಲ ಎಂದು ಸಿಪಿವೈ ಹೇಳಿದರು.
ಪಕ್ಷೇತರವಾಗಿ ಸ್ಪರ್ಧೆ ಮಾಡಲು ಇಚ್ಛಿಸಿರುವ ಸಿಪಿ ಯೋಗೇಶ್ವರ್, ಗುರುವಾರ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.
ಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರಿಗೆ ಅನ್ನಪೂರ್ಣ – ಶೀಘ್ರವೇ ಪ್ರಕಟಣೆ ಸಾಧ್ಯತೆ
14 ನೇ ವರ್ಷಕ್ಕೆ ಕಾಲಿಟ್ಟ ನಮ್ಮ ಮೆಟ್ರೋ; ದೇಶದ 2ನೇ ಅತೀ ದೊಡ್ಡ ಮೆಟ್ರೋ ರೈಲು ಜಾಲ ನಮ್ಮದೇ!