newsics.com
ನವದೆಹಲಿ: ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಹೌದು,ಪ್ರಧಾನಿ ಮೋದಿ ಶೈಕ್ಷಣಿಕ ಪದವಿ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಕೊರ್ಟ್ ವಜಾಗೊಳಿಸಿದೆ.
ಇನ್ನು ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಹೃಷಿಕೇಶ್ ರಾಯ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿ ವಜಾ ಮಾಡಿದೆ.
ಇದೇ ಪ್ರಕರಣದಲ್ಲಿ ಎಎಪಿ ನಾಯಕ ಸಂಜಯ್ ಸಿಂಗ್ ಸಲ್ಲಿಸಿದ್ದ ಮನವಿಯನ್ನೂ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಋಷಿಕೇಶ್ ರಾಯ್ ಮತ್ತು ಎಸ್.ವಿ.ಎನ್ ಭಟ್ಟಿ ಅವರಿದ್ದ ಪ್ರತ್ಯೇಕ ಪೀಠ ರದ್ದುಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಪದವಿಗಳ ಬಗ್ಗೆ ಪ್ರಶ್ನಿಸಿದ್ದ ಕೇಜ್ರವಾಲ್ ಮತ್ತು ಸಂಜಯ್ ಸಿಂಗ್ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯ ಮಾನನಷ್ಟ ಮೊಕದ್ದಮೆ ಹೂಡಿತ್ತು. ಈ ಸಂಬಂಧ ಸೆಷನ್ಸ್ ನ್ಯಾಯಾಲಯ ಸಮನ್ಸ್ ನೀಡಿತ್ತು. ಕೆಳ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸುವಂತೆ ಉಭಯ ನಾಯಕರು (ಸಂಜಯ್ ಸಿಂಗ್ ಹಾಗೂ ಕೇಜ್ರವಾಲ್) ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದರು. ವಾದ ಆಲಿಸಿದ ಬಳಿಕ ಕೋರ್ಟ್ ಕೇಜ್ರಿವಾಲ್ ಅರ್ಜಿ ವಜಾಗೊಳಿಸಿದೆ