newsics.com
ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿಯಾಗುತ್ತಿದ್ದಂತೆ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಪರಿಣಾಮ ಅಂಡರ್ಪಾಸ್ನಲ್ಲಿ ವಾಹನಗಳು ಸಿಲುಕಿಕೊಂಡಿವೆ.
ಅಂಡರ್ಪಾಸ್ನಲ್ಲಿ ನೀರು ತುಂಬಿದ್ದರಿಂದ ಟೆಂಪೊ ಟ್ರಾವೆಲರ್, ಖಾಸಗಿ ಬಸ್ ಸಿಲುಕಿಕೊಂಡಿದೆ. ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ.
ಯಲಹಂಕ ಮುಖ್ಯರಸ್ತೆ ರೈತ ಸಂತೆ ಬಳಿ ಮಳೆ ನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿದ್ದು, ದಯಮಾಡಿ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ತಿಳಿಸಿದ್ದಾರೆ.
ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ ಆಗಿದ್ದು, ಚರಂಡಿ ಉಕ್ಕಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿದಿದೆ. ಕೊಡಿಗೆಹಳ್ಳಿ ತಿಂಡ್ಲು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಜಲಾವೃತಗೊಂಡಿದೆ.