newsics.com
ನ್ಯೂಸಿಕ್ಸ್.ಕಾಮ್
ಇಂದಿನ ರಾಶಿ ಭವಿಷ್ಯ
22-10-2024, ಮಂಗಳವಾರ
ಮೇಷ
ಕುಟುಂಬದ ಸದಸ್ಯ ಹಾಗೂ ಸ್ನೇಹಿತರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು ಇರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದ್ದು, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4
ವೃಷಭ
ಕೆಲಸ ಕಾರ್ಯಗಳಲ್ಲಿ ನಿಮಗೆ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.ಅದೃಷ್ಟ ಸಂಖ್ಯೆ: 3
ಮಿಥುನ
ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದ್ದು, ಮೌನವಾಗಿರುವುದೇ ಉತ್ತಮ. ಅನಿರೀಕ್ಷಿತ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1
ಕರ್ಕಾಟಕ
ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5
ಸಿಂಹ
ಆಕರ್ಷಕ ಮಾತುಗಳಿಂದ ನೀವು ಇತರರನ್ನು ಆಕರ್ಷಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಂಗಾತಿಯ ಮಾತುಗಳು ಮಧುರವೇನಿಸುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3
ಕನ್ಯಾ
ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ. ವಿನಾಕಾರಣ ವಿವಾದ ಮೈಮೇಲೆ ಎಳೆದುಕೊಳ್ಳುವುದು ಬೇಡ. ನಿಮ್ಮ ತ್ಯಾಗ ಮನೋಭಾವ ನಿಮಗೆ ಸಂತಸ ತರುವುದು. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1
ತುಲಾ
ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4
ವೃಶ್ಚಿಕ
ಅನಾವಶ್ಯಕ ವಿಚಾರಕ್ಕೆ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡದಿರಿ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 5
ಧನುಸ್ಸು
ಇಂದು ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2
ಮಕರ
ಆತುರದಲ್ಲಿ ಅತಿರೇಕದ ಮಾತುಗಳಿಂದ ಜಗಳಕ್ಕೆ ಕಾರಣವಾಗಬಹುದು. ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕಿಳಿಯಬೇಡಿ. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2
ಕುಂಭ
ಆತುರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9
ಮೀನ
ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7
ಶುಭೋದಯ… ಪಂಚಾಂಗ, ಸುಭಾಷಿತ, ದಿನದ ಮಾತು, ಆಶ್ವಯುಜ ಕೃಷ್ಣಪಕ್ಷ ಷಷ್ಠಿ, ಮಂಗಳವಾರ, 22-10-2024