newsics.com
ಹಾಸನ: ಹಾಸನಾಂಬೆಯ ದರ್ಶನೋತ್ಸವ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಆಶ್ವೀಜ ಮಾಸದ ಮೊದಲವಾದ ಇಂದು ಮಧ್ಯಾಹ್ನ 12 ಗಂಟೆ ನಂತರ ದೇವಿಯ ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಿದೆ. ನ.3ರ ಬೆಳಿಗ್ಗೆವರೆಗೆ ದೇವಿಯ ದರ್ಶನೋತ್ಸವಕ್ಕೆ ಅವಕಾಶವಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ವರ್ಷಕ್ಕೊಮ್ಮೆ ದರ್ಶನ ನೀಡಲು ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ದಿನದ 24 ಗಂಟೆಯೂ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರ ದರ್ಶನಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಾದ ಮಳೆ-ಬಿಸಿಲಿನಿಂದ ಭಕ್ತರು ಆಶ್ರಯ ಪಡೆಯಲು ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದೆ.