newsics.com
ಬೆಂಗಳೂರು: ಬೆಂಗಳೂರಿನ ಜನರು ಈಗಾಗಲೇ ವರುಣನ ಆರ್ಭಟಕ್ಕೆ ಕಂಗಾಲಾಗಿದ್ದಾರೆ. ಸ್ವಲ್ಪ ಸುಧಾರಿಸಿಕೊಂಡಿದ್ದ ಸಿಲಿಕಾನ್ ಸಿಟಿ ಜನಕ್ಕೆ ಇಂದಿನಿಂದ ಇನ್ನೂ ನಾಲ್ಕು 4 ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇಂದು ಬೆಳಗ್ಗೆಯೇ ಸತತ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.
ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ.