newsics.com
ಬೆಂಗಳೂರು: ಬೆಂಗಳೂರಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಎಂಟು ಮಂದಿ ಮೃತಪಟ್ಟಿದ್ದರು. ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ನಾನು ನಿನ್ನೆ ವೈಯಾನಡ್ಗೆ ಹೋಗಿದ್ದೆ. ಹಾಗಾಗಿ ಇಲ್ಲಿಗೆ ಬರುವುದು ತಡವಾಗಿದೆ. ಕಟ್ಟಡ ಕುಸಿತ ದುರಂತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಆರು ಮಂದಿಗೆ ಗಾಯಳಾಗಿವೆ ಅವರ ಆಸ್ಪತ್ರೆ ಖರ್ಚು ಸರ್ಕಾರ ಭರಿಸುತ್ತದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರವಾಗಿ 5 ಲಕ್ಷ ನೀಡಲಾಗುವುದು. ಕಾರ್ಮಿಕ ಇಲಾಖೆಯಿಂದ ಎರಡು ಲಕ್ಷ ನೀಡಲಾಗುತ್ತದೆ. ಬಿಬಿಎಂಪಿಯಿಂದ ಮೂರು ಲಕ್ಷ ಪರಿಹಾರ ಘೋಷಿಸಿದೆ ಎಂದು ತಿಳಿಸಿದ್ದಾರೆ.