newsics.com
ಮುಂಬೈ: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ರವಾನಿಸಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಜಾರ್ಖಂಡ್ ನ ಜೆಮ್ ಶೆಡ್ ಪುರ ಮೂಲದ ತರಕಾರಿ ಮಾರಾಟಗಾರ ಶೇಖ್ ಹುಸೇನ್ ಮೌಸಿನ್(24) ಎಂದು ಗುರುತಿಸಲಾಗಿದೆ.
ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ ಅವರು 5 ಕೋಟಿ ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ.
ಹಣ ನೀಡದಿದ್ದರೆ, ಸಲ್ಮಾನ್ ಖಾನ್ ಅವರ ಸ್ಥಿತಿ ಬಾಬಾ ಸಿದ್ದಿಕ್ ಗಿಂತ ಕೆಟ್ಟದಾಗುತ್ತದೆ‘‘ ಎಂದು ಈ ವ್ಯಕ್ತಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶ ರವಾನಿಸಿದ್ದ. ಈ ಸಂಬಂಧ ವರ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ, ಇಬ್ಬರ ನಡುವಣ ದ್ವೇಷ ಕೊನೆಗೊಳಿಸಲು 5 ಕೋಟಿ ರೂಪಾಯಿ ನೀಡುವಂತೆ ಒತ್ತಾಯಿಸಿದ್ದ ಜೆಮ್‌ಶೆಡ್‌ಪುರದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.