newsics.com
ನವದೆಹಲಿ : ಹಾಲಿ ಸಿಜೆಐ ಡಿ.ವೈ.ಚಂದ್ರಚೂಡ್ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೂತನ ಸಿಜೆಐ ಆಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಹಾಗಾದ್ರೆ, ಮುಂದಿನ ಸಿಜೆಐ ನ್ಯಾ. ಸಂಜೀವ್ ಖನ್ನಾ ಹಿನ್ನೆಲೆ ಏನು? ಎನ್ನುವ ವಿವರ ಇಲ್ಲಿದೆ.
ಇನ್ನು ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನವೆಂಬರ್ 11ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
2005ರಲ್ಲಿ ದೆಹಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ನ್ಯಾ. ಸಂಜೀವ್ ಖನ್ನಾ ಅವರನ್ನು ಒಂದು ವರ್ಷದ ಬಳಿಕ ಖಾಯಂ ನ್ಯಾಯಮೂರ್ತಿಯಾಗಿ ನೇಮಿಸಲಾಯಿತು. ಬಳಿಕ ಅವರು 2019, ಜನವರಿ 18ರಂದು ಸುಪ್ರೀಂ ಕೋರ್ಟ್‌ಗೆ ಪದೋನ್ನತಿ ಪಡೆದಿದ್ದರು.