newsics.com
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಜೀಶನ್ ಸಿದ್ದಿಕಿ ಇಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರ್ಪಡೆಗೊಂಡಿದ್ದಾರೆ.
ಅಜಿತ್ ಪವಾರ್ ಮತ್ತು ಸುನಿಲ್ ತಟ್ಕರೆ ಸಮ್ಮುಖದಲ್ಲಿ ಝೀಶಾನ್ ಎನ್‌ಸಿಪಿಗೆ ಸೇರ್ಪಡೆಗೊಂಡರು. ಇದರೊಂದಿಗೆ ವಿಧಾನಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಈ ಮೂಲಕ ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.
ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್‌ಸಿಪಿಗೆ ಸೇರ್ಪಡೆಗೊಂಡಿದ್ದರು. ಇದಕ್ಕೂ ಮುನ್ನ ದೀರ್ಘಕಾಲ ಕಾಂಗ್ರೆಸ್ ಸದಸ್ಯರಾಗಿದ್ದರು. ಅಕ್ಟೋಬರ್ 12ರಂದು ಬಾಬಾ ಸಿದ್ದೀಕಿ ಅವರನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯರು ಗುಂಡಿಕ್ಕಿ ಹತ್ಯೆ ಮಾಡಿದ್ದರು.
ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಮೇಲೆ ಸಿದ್ದಿಕಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು ಆದರೆ ಈ ಆರೋಪವನ್ನು ಝೀಶಾನ್ ತಳ್ಳಿಹಾಕಿದ್ದರು.