newsics.com
ಖಾಸಗಿ ಶಾಲೆಗಳ ಸ್ಕೂಲ್ ಫೀಸ್ ಯಾವಾಗ್ಲೂ ದುಬಾರಿಯಾಗಿರುತ್ತದೆ ಅನ್ನೋ ವಿಚಾರ ಎಲ್ರಿಗೂ ಗೊತ್ತೇ ಇದೆ. ಸದ್ಯ 2024-25 ರ ನರ್ಸರಿ ಮತ್ತು ಜ್ಯೂನಿಯರ್ ಕೆಜಿ ಬ್ಯಾಚ್‌ನ ಶಾಲಾ ಶುಲ್ಕ ರಶೀದಿಯ ಫೋಟೋ ಇದೀಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ.
ಹೌದು, ಖಾಸಗಿ ಶಾಲೆಯೊಂದು ನರ್ಸರಿ ಮತ್ತು ಎಲ್.ಕೆ.ಜಿಯ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ ಬರೋಬ್ಬರಿ 1.5 ಲಕ್ಷ ರೂ. ಶಾಲಾ ಶುಲ್ಕವನ್ನು ವಿಧಿಸಿದೆ. ಈ ದುಬಾರಿ ಶುಲ್ಕ ವಿವರದ ಫೋಟೋ ಇದೀಗ ವೈರಲ್ ಆಗುತ್ತಿದ್ದು, ಇದನ್ನೆಲ್ಲಾ ನೋಡ್ತಿದ್ರೆ ಸರ್ಕಾರಿ ಶಾಲೆಗಳೇ ಬೆಸ್ಟ್ ಅನ್ಸುತ್ತೆ ಎಂದು ನೆಟ್ಟಿಗರು ಹೇಳಿಕೊಂಡಿದ್ದಾರೆ.
ಈ ಕುರಿತ ಪೋಸ್ಟ್ ಒಂದನ್ನು ಬೆಂಗಳೂರಿನ ವೈದ್ಯರಾದ ಡಾ. ಜಗದೀಶ್ ಚತುರ್ವೇದಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಕೇವಲ ಪೇರೆಂಟ್ ಓರಿಯೆಂಟೇಷನ್‌ಗೆ 8400 ಫೀಸ್ ಅಂತೆ, ಇದನ್ನೆಲ್ಲಾ ನೋಡಿ ಈಗ ನಾನು ಒಂದು ಶಾಲೆಯನ್ನು ತೆರೆಯಬೇಕೆಂದು ಪ್ಲಾನ್ ಮಾಡ್ತಿದ್ದೇನೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.
ವೈರಲ್ ಆಗುತ್ತಿರುವ ಶಾಲಾ ಶುಲ್ಕ ವಿವರದ ಫೋಟೋದಲ್ಲಿ ಅಡ್ಮಿಶನ್ ಫೀಸ್, ಪೇರೆಂಟ್ ಓರಿಯೆಂಟೇಷನ್ ಫೀಸ್, ವಾರ್ಷಿಕ ಶುಲ್ಕ ಎಲ್ಲವನ್ನು ಸೇರಿಸಿ ಬರೋಬ್ಬರಿ 1,51,656 ರೂ. ಶಾಲಾ ಶುಲ್ಕವನ್ನು ವಿಧಿಸಿರುವ ದೃಶ್ಯವನ್ನು ಕಾಣಬಹುದು.