newsics.com
ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ನೀಡಿದವರಿಗೆ ₹10 ಲಕ್ಷ ಬಹುಮಾನ ನೀಡುವುದಾಗಿ ಖಲಿಸ್ತಾನಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂ ಘೋಷಿಸಿದ್ದಾರೆ.
1984ರ ಸಿಖ್ ಹತ್ಯಾಕಾಂಡದ ವೇಳೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಕಾನೂನುಬಾಹಿರ ಹತ್ಯೆಗಳು ಸೇರಿದಂತೆ ವಿವಿಧ ದೌರ್ಜನ್ಯಗಳನ್ನು ಎಸಗಿದ್ದಾರೆ. ಹಾಗಾಗಿ ದೇಶದಾದ್ಯಂತ ನವೆಂಬರ್ 26ರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಸಿಆರ್‌ಪಿಎಫ್ ಶಾಲೆಗಳನ್ನು ಬಹಿಷ್ಕರಿಸಬೇಕು ಎಂದು ಗುರುಪತ್ವಂತ್ ಸಿಂಗ್ ಪನ್ನೂ ಒತ್ತಾಯಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ, ಭಾರತದ ಸಿಆರ್‌ಪಿಎಫ್‌ನ ನೇತೃತ್ವ ವಹಿಸುತ್ತಿದ್ದಾರೆ. ಕೆನಡಾದ ಸಿಖ್ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ನ್ಯೂಯಾರ್ಕ್‌ನಲ್ಲಿ ಸಂಚು ರೂಪಿಸಿದ್ದರು ಎಂದು ಪನ್ನೂ ಆರೋಪಿಸಿದ್ದಾರೆ.