newsics.com
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಸ್ವಸ್ಥರಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾದ್ದರಿಂದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜಭವನ ಮೂಲಗಳು ತಿಳಿಸಿವೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರತರ ವೈರಲ್ ಫೀವರ್‌ನಿಂದ ಬಳಲುತ್ತಿದ್ದಾರೆಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಥಾವರ್ ಚಂದ್ ಗೆಹ್ಲೋಟ್ ಅವರನ್ನು ಪರೀಕ್ಷೆಗೆ ಒಳಪಡಿಸಿರುವ ವೈದ್ಯರು, ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಉಗುರು ಬಿಟ್ಟು ಗಿನ್ನೆಸ್ ದಾಖಲೆ ಬರೆದ ಮಹಿಳೆ; 27 ವರ್ಷದಿಂದ ನೇಲ್ ಕತ್ತರಿಸಿಲ್ಲವಂತೆ!