newsics.com
ಬೆಂಗಳೂರು : ಈ ಬಾರಿ ದೀಪಾವಳಿ ಹಬ್ಬ ವಾರಾಂತ್ಯದ ವೇಳೆ ಬಂದಿರುವುದರಿಂದ ಸಾಲು ಸಾಲು ರಜೆಗಳಿವೆ. ಶುಕ್ರವಾರ ಕನ್ನಡ ರಾಜ್ಯೋತ್ಸವ ಸಹ ಇರುವುದರಿಂದ ಊರಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ.
ರಾಜ್ಯ ಸಾರಿಗೆ ಇಲಾಖೆ ಕಡಿವಾಣ ಹಾಕಲು ಮುಂದಾಗಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ ಆನ್ ಲೈನ್ ಮೂಲಕ ಟಿಕೆಟ್ ದರವನ್ನು ಹೆಚ್ಚಿಸಿದ್ರೆ ಕಠಿಣ ಕ್ರಮಕೈಗೊಳ್ಳುವುದಾಗಿ ಖಾಸ್ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.
ಸಾರ್ವಜನಿಕ ಸೇವಾ ವಾಹನಗಳಲ್ಲಿ ಸ್ಪೋಟಕ ಸಾಮಗ್ರಿಗಳ ಸಾಗಾಣಿಕೆಗೆ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಸಾರಿಗೆ ಇಲಾಖೆ, ಖಾಸಗಿ ಬಸ್ ಗಳು ಹೆಚ್ಚಿನ ಟಿಕೆಟ್ ದರ ಸಂಗ್ರಹಿಸಿದ್ರೆ ಸಾರ್ವಜನಿಕರು ದೂರು ನೀಡುವಂತೆ ಮನವಿ ಮಾಡಿದೆ. ನಿಯಂತ್ರಣ ಕೊಠಡಿ ಸಂಖ್ಯೆ-9449863429,9449863426 ಕೆರೆ ಮಾಡಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.