newsics.com
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಬೇಡಿಕೆ ಮತ್ತು ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ನೈಋತ್ಯ ರೈಲ್ವೆ ವಲಯವು ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ.
ಎಸ್ಎಂವಿಟಿ ಬೆಂಗಳೂರು-ಕಲಬುರಗಿ, ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ನಡುವೆ ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ನೈಋತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ.

ಎಸ್ಎಮ್ವಿಟಿ ಬೆಂಗಳೂರು-ಕಲಬುರಗಿ (06217) ವಿಶೇಷ ರೈಲು ಅಕ್ಟೋಬರ್ 31 ರಂದು ರಾತ್ರಿ 9:15ಕ್ಕೆ ಎಸ್ಎಮ್ವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 7:40ಕ್ಕೆ ಕಲಬುರಗಿ ತಲುಪಲಿದೆ.
ಎಸ್ಎಮ್ವಿಟಿ ಬೆಂಗಳೂರು-ಕಲಬುರಗಿ (06218) ವಿಶೇಷ ರೈಲು ನವೆಂಬರ್ 01 ರಂದು ಬೆಳಗ್ಗೆ 9:35ಕ್ಕೆ ಕಲುಬುರಗಿಯಿಂದ ಹೊರಟು ಅದೇ ದಿನ ರಾತ್ರಿ 8:00ಕ್ಕೆ ಎಸ್ಎಮ್ವಿಟಿ ಬೆಂಗಳೂರಿನಿಂದ ತಲುಪಲಿದೆ.
ಹುಬ್ಬಳ್ಳಿ-ಯಶವಂತಪುರ (07323) ವಿಶೇಷ ರೈಲು ಅಕ್ಟೋಬರ್ 30 ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8 ಗಂಟೆಗೆ ಹೊರಟು ಅದೇ ದಿನ ಸಂಜೆ 3:45ಕ್ಕೆ ಯಶವಂತಪುರ ತಲುಪಲಿದೆ.