newsics.com
ನವದೆಹಲಿ: ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ನಾಗರಿಕರಿಗೆ ಆರೋಗ್ಯ ರಕ್ಷಣೆಯನ್ನು ನೀಡುವ ಸರ್ಕಾರದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಲಿದ್ದಾರೆ.
ವಾಡಿಕೆಯ ಪ್ರತಿರಕ್ಷಣೆಗಳ ವಿದ್ಯುನ್ಮಾನ ನೋಂದಾವಣೆಯನ್ನು ನಿರ್ವಹಿಸಲು ಅಭಿವೃದ್ಧಿಪಡಿಸಿದ U-WIN ಪೋರ್ಟಲ್, ಪ್ರಸ್ತುತ ಪ್ರಾಯೋಗಿಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ. ಅದನ್ನು ಸಹ ಇಂದು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ. ಇವೆರಡನ್ನು ಹೊರತುಪಡಿಸಿ, ಇನ್ನೂ ಕೆಲವು ಯೋಜನೆಗಳನ್ನು ಪ್ರಧಾನ ಮಂತ್ರಿಗಳು ಉದ್ಘಾಟಿಸಲಿದ್ದಾರೆ.
70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ವಿಸ್ತೃತ ಯೋಜನೆ ಇದಾಗಿದ್ದು, ಸುಮಾರು 4.5 ಕೋಟಿ ಕುಟುಂಬಗಳ ಅಂದಾಜು ಆರು ಕೋಟಿ ನಾಗರಿಕರಿಗೆ ಪ್ರಯೋಜನ ಸಿಗಲಿದೆ.