Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ಜಾಮೀನು: ನಾಳೆ ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖಮನರಂಜನೆ

ನಟ ದರ್ಶನ್‌ಗೆ ಜಾಮೀನು: ನಾಳೆ ಹೈಕೋರ್ಟ್ ಆದೇಶ

Share
2 Min Read
SHARE

newsics.com

ಬೆಂಗಳೂರು: ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಸಂಬಂಧದ ವಾದ-ವಿವಾದ ಆಲಿಸಿದ ಹೈಕೋರ್ಟ್ ನಾಳೆ(ಅ.30)ಗೆ ತೀರ್ಪು ಕಾಯ್ದಿರಿಸಿದೆ.

ನಟ ದರ್ಶನ್ ಅವರ ಆರೋಗ್ಯ ಸಮಸ್ಯೆಯನ್ನು ಮುಂದಿಟ್ಟು ಜಾಮೀನು ಕೇಳಲಾಗಿದೆ. ದರ್ಶನ್‌ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ.

ಆದರೆ ಎಸ್ಪಿಪಿ ಅವರು ದರ್ಶನ್ ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದ್ದಾರೆ. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 30 ಕ್ಕೆ ಕಾಯ್ದಿರಿಸಿದ್ದಾರೆ.

ನಿನ್ನೆಯ ವಾದ ಮುಂದುವರೆಸಿದ ದರ್ಶನ್ ವಕೀಲ ಸಿವಿ ನಾಗೇಶ್, ‘ದರ್ಶನ್ ಬೆನ್ನು ಹುರಿಯ ಸಮಸ್ಯೆ ಯಿಂದ ಬಳಲುತ್ತಿದ್ದಾರೆ. ಅದರಿಂದ ಈಗಾಗಲೇ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೇ ಮುಂದುವರಿದರೆ ಇನ್ನಷ್ಟು ಸಮಸ್ಯೆ ಆಗಬಹುದು. ಡಿಸ್ಕ್ ನಲ್ಲಿನ ಸಮಸ್ಯೆಯಿಂದ ನರದಿಂದ ರಕ್ತಪರಿಚಲನೆ ಆಗುತ್ತಿಲ್ಲ …‌ ಹೀಗಾಗಿ ಶಸ್ತ್ರಚಿಕಿತ್ಸೆ ಅಗತ್ಯವಿದೆ. ಪಾರಂಪರಿಕ ಚಿಕಿತ್ಸೆಯಿಂದ ಇದು ಪರಿಹಾರ ಆಗದು, ಅದಕ್ಕೆ ಶಸ್ತ್ರಚಿಕಿತ್ಸೆಯನ್ನೇ ಮಾಡಿಸಬೇಕು. ಈ ಹಿಂದೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾಗ ಆರೋಗ್ಯ ಸಮಸ್ಯೆ ಉಲ್ಲೇಖಿಸಿರಲಿಲ್ಲ. ಆದರೆ ಈಗ ಸಮಸ್ಯೆ ಉಲ್ಬಣ ಆಗಿರುವ ಕಾರಣ ಕೇಳುತ್ತಿದ್ದೇವೆ. ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಬೇಕು’ ಎಂದು ವಾದಿಸಿದರು.

ಕೆಲವು ಹಳೆಯ ಪ್ರಕರಣಗಳು ಹಾಗೂ ಸುಪ್ರೀಂಕೋರ್ಟ್‌ನ ಕೆಲ ಆದೇಶಗಳನ್ನು ಸಹ ಉಲ್ಲೇಖ ಮಾಡಿದ ಸಿವಿ ನಾಗೇಶ್ ಅವರು, ‘ಆರೋಗ್ಯ ಪ್ರತಿಯೊಬ್ಬರ ಹಕ್ಕು. ಅವರು ಎಂತಹ ಕಠಿಣ ಪ್ರಕರಣದಲ್ಲಿ ಸಿಲುಕಿದ್ದರೂ ಮೆರಿಟ್‌ಗಳನ್ನು ನೋಡದೆ ಜಾಮೀನು ನೀಡಬೇಕಾಗುತ್ತದೆ. ಈ ಹಿಂದೆ ಇಂಥ ಹಲವು ಪ್ರಕರಣಗಳಲ್ಲಿ ಜಾಮೀನು ನೀಡಲಾಗಿದೆ ಎಂದರು.
ಆದರೆ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಎಸ್ಪಿಪಿ ಪ್ರಸನ್ನ ಕುಮಾರ್, ‘ರೋಗಿಯ (ದರ್ಶನ್) ತಪಾಸಣೆ ಮಾಡಿರುವ ವೈದ್ಯರು ಮುಂದೊಮ್ಮೆ ಸಮಸ್ಯೆ ಆಗಬಹುದು ಎಂದಿದ್ದಾರೆ, ಅಲ್ಲದೆ ಹಿಂದಿನ ವರದಿಯಲ್ಲಿ ಅಷ್ಟೇನೂ ಸಮಸ್ಯೆ ಇಲ್ಲ ಎಂದಿದ್ದರು, ಈ ಹಿಂದೆ ಹಿಪ್ ಜಾಯಿಂಟ್ ಸಮಸ್ಯೆ ಇತ್ತು ಅದನ್ನು ಸರಿಪಡಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ’ ಎಂದರು. ಆದರೆ ಅದಕ್ಕೆ ಸ್ವತಃ ಜಡ್ಜ್ ಪ್ರಶ್ನೆ ಕೇಳಿ, ‘ಮುಂದೆ ಆದಾಗ ಅದನ್ನು ಸರಿ ಮಾಡಬಹುದೇ? ವಿಚಾರಣಾಧೀನ ಕೈದಿಗೂ ಉತ್ತಮ ಆರೋಗ್ಯದ ಹಕ್ಕಿದೆ’ ಎಂದರು. ‘ಈ ಹಿಂದಿನ ವರದಿಯಲ್ಲಿ ಹಾಗಿದೆ, ಆದರೆ ಜೈಲು ಸೇರಿದ ಮೇಲಿನ ವರದಿಯಲ್ಲಿ ಅನಾರೋಗ್ಯ ಎಂದಿದೆಯಲ್ಲ. ಈಗಿನ ವರದಿಯನ್ನು ಪರಿಗಣಿಸಬೇಕು ತಾನೆ? ಎಂದು ಜಡ್ಜ್ ಎಸ್ಪಿಪಿ ಪ್ರಸನ್ನ ಅವರನ್ನು ಪ್ರಶ್ನೆ ಮಾಡಿದರು.
ಎಸ್ಪಿಪಿ ಪ್ರಸನ್ನ ಅವರು, ‘ವೈದ್ಯರ ವರದಿಯಲ್ಲಿ ಯಾವ ರೀತಿಯ ಶಸ್ತ್ರಚಿಕಿತ್ಸೆ ಮಾಡಬೇಕಿದೆ? ಎಷ್ಟು ದಿನದ ಅವಶ್ಯಕತೆ ಇದೆ? ಎಲ್ಲಿ ಆಪರೇಷನ್ ಮಾಡಲಾಗುವುದು ಇತ್ಯಾದಿ ಮಾಹಿತಿ ಇಲ್ಲ’ ಎಂದರು. ಇದಕ್ಕೆ ಉತ್ತರಿಸಿದ ಸಿವಿ ನಾಗೇಶ್ ಅವರು, ‘ದರ್ಶನ್ ಮೈಸೂರು ನಿವಾಸಿ ಆಗಿದ್ದು, ಈ ಹಿಂದೆ ಒಮ್ಮೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈಗಲೂ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಾರೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳು ಯಾರೂ ಮೈಸೂರಿನಲ್ಲಿ ಇಲ್ಲ’ ಎಂದರು.

ಇಬ್ಬರೂ ವಕೀಲರ ವಾದಗಳನ್ನು ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 30 ಅಂದರೆ ನಾಳೆಗೆ ಮುಂದೂಡಿದರು. ನಾಳೆ ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರಾಗುವ ಸಾಧ್ಯತೆ ದಟ್ಟವಾಗಿದೆ.

ನಾಳೆ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಗುತ್ತಾ? ಚಿಕಿತ್ಸೆ ನೀಡದಿದ್ದರೆ ಕಾಲುಗಳು ಸ್ಪರ್ಶ ಕಳೆದುಕೊಳ್ಳುವ ಸಾಧ್ಯತೆ!

ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ: ಅಪ್ಪು ಕುರಿತು ಅನುಶ್ರೀ ಭಾವುಕ ಪೋಸ್ಟ್

ಹಬ್ಬದ ಎಫೆಕ್ಟ್‌.. ಆಭರಣ ಪ್ರಿಯರಿಗೆ ಬಿಗ್‌ಶಾಕ್..‌ ಭರ್ಜರಿ ಏರಿಕೆಯಾದ ಚಿನ್ನದ ಬೆಲೆ!

TAGGED:Bail for actor Darshan: High Court order tomorrow
Share This Article
Facebook Twitter Copy Link Print
Previous Article ಹೊಕ್ಕಳಿಗೆ ತುಪ್ಪ ಹಚ್ಚಿದರೆ ಇಷ್ಟೆಲ್ಲಾ ಉಪಯೋಗವಿದೆಯೇ?
Next Article ಈ ರೀತಿ ಮಾಡಿದ್ರೆ ದಾಂಪತ್ಯ ಜೀವನವೇ ಛಿದ್ರ-ಛಿದ್ರವಾಗುತ್ತೆ ಎಚ್ಚರ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?