Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನಾಂಬೆ ದರ್ಶನ ವಿಚಾರ: ಅಧಿಕಾರಿಗಳ ಮಾರಾಮಾರಿ, ಡಿಸಿಗೇ ಏರುಧ್ವನಿಯಲ್ಲಿ‌ ಮಾತಾಡಿದ ಪೊಲೀಸ್ ಇನ್ಸ್‌ಪೆಕ್ಟರ್
ಕರ್ನಾಟಕಪ್ರಮುಖ

ಹಾಸನಾಂಬೆ ದರ್ಶನ ವಿಚಾರ: ಅಧಿಕಾರಿಗಳ ಮಾರಾಮಾರಿ, ಡಿಸಿಗೇ ಏರುಧ್ವನಿಯಲ್ಲಿ‌ ಮಾತಾಡಿದ ಪೊಲೀಸ್ ಇನ್ಸ್‌ಪೆಕ್ಟರ್

Share
1 Min Read
SHARE

newsics.com

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಭಕ್ತರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸಪಡುತ್ತಿದ್ದಾರೆ.

ಈ ಮಧ್ಯೆ, ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಮಾರಾಮಾರಿಯಾಗಿದೆ. ಗಲಾಟೆಯಲ್ಲಿ ಜಿಲ್ಲಾಧಿಕಾರಿ ಪ್ರವೇಶ ಮಾಡಿದ್ದು, ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ರಾತ್ರಿ ಹಾಸನ ನಗರಸಭೆ ಎದುರಿನ ಮುಖ್ಯದ್ವಾರದ ಬಳಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಡಿಸಿ ಕಚೇರಿ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದು, ಜಗಳ ಬಿಡಿಸಲು ಕಂದಾಯ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟರು.

ದೇವಿ ದರ್ಶನಕ್ಕೆ ಬಂದ ಭಕ್ತರನ್ನು ಬಿಡುವ ವಿಚಾರಕ್ಕೆ ಎರಡು ಸರ್ಕಾರಿ ಇಲಾಖೆ ಸಿಬ್ಬಂದಿ ಪರಸ್ಪರ ಬಡಿದಾಡಿಕೊಂಡಿದ್ದು, ಕೊನೆಗೆ ಪೊಲೀಸರು ಜಿಲ್ಲಾಧಿಕಾರಿ ಸಿಬ್ಬಂದಿಯನ್ನು ಹೊರಗೆ ದಬ್ಬಿದ್ದಾರೆ.

ಶಿಷ್ಟಾಚಾರದ ವಾಹನ ತಡೆದಿದ್ದಕ್ಕೆ ಡಿಸಿ ಪಿಎ ಶಶಿ ಹಾಗೂ ಸಬ್‌ಇನ್ಸ್‌ಪೆಕ್ಟರ್, ಇನ್ಸ್‌ಪೆಕ್ಟರ್ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದುಬಂದಿದೆ. ಅಲ್ಲದೇ ಡಿ‌ಸಿ ಪಿಎ ಶಶಿ ಎಂಬಾತನನ್ನು ಪೊಲೀಸರು ಹೊರಗೆ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಸಿ.ಸತ್ಯಭಾಮ ಗಮನಕ್ಕೆ ಬಂದಿದ್ದು, ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಅಲ್ಲದೇ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೇಳಿ ಅಮಾನತು ಮಾಡಿಸುವುದಾಗಿ ಎಚ್ಚರಿಕೆ ನಿಡಿದರು.

ಮಳವಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಮತ್ತು ಡಿಸಿ ನಡುವೆ ವಾಗ್ವಾದ ನಡೆದಿದ್ದು, ಮಹಿಳಾ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ಗೆ ಗಾಯವಾಗಿದೆ. ಕೂಡಲೇ ಚಿಕಿತ್ಸೆ ಕೊಡಿಸಿ. ನಿಮ್ಮ ಪಿ‌ಎ ವರ್ತನೆಯೇ ಘಟನೆಗೆ ಕಾರಣ ಎಂದು ಸಿಪಿಐ ರವಿ ಅವರು ಡಿಸಿಗೆ ಏರು ಧ್ವನಿಯಲ್ಲೇ ಹೇಳಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯ್ತು. ಅಂತಿಮವಾಗಿ ಗೇಟ್ ಮುಂದೆ ಕಂದಾಯ ಅಧಿಕಾರಿಗಳು ನಿಂತು ಕೆಲಸ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಆದೇಶ ನೀಡಿ ಅಲ್ಲಿಂದ ತೆರಳಿದರು ಎಂದು ವರದಿಯಾಗಿದೆ.

ರಂಗೋಲಿ ಹಾಕುತ್ತಿದ್ದ ಇಬ್ಬರ ಮೇಲೆ ಕಾರು ಚಲಾಯಿಸಿದ ಬಾಲಕ! ಬಾಲಕಿಯರ ಸ್ಥಿತಿ ಚಿಂತಾಜನಕ

ಯುವಕರನ್ನು ಬೆಚ್ಚಿ ಬೀಳಿಸುವ ಬ್ರೈನ್ ಸ್ಟ್ರೋಕ್! ಏನು ಮಾಡಬೇಕು?

ಅಯೋಧ್ಯೆಯಲ್ಲಿ ಕೋತಿಗಳ ಆಹಾರಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡಿದ ನಟ !

ಸಿಎಂ ಪತ್ನಿಗೆ ನಿವೇಶನ ಮಂಜೂರು ಮಾಡಿದ ಆಯುಕ್ತ ಇಡಿ ವಶಕ್ಕೆ

TAGGED:Hasanambe Darshan case: Officers clashedpolice inspector spoke in loud voice to DC
Share This Article
Facebook Twitter Copy Link Print
Previous Article ದಿನ ಭವಿಷ್ಯ… 30-10-2024, ಬುಧವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಮದುವೆಗೂ‌ ಮೊದಲೇ ಗರ್ಭಿಣಿಯಾದ್ರಾ ನಟಿ ಶೋಭಿತಾ? ಇನ್ಸ್ಟಾ ಫೋಟೋ ಸೃಷ್ಟಿಸಿದ ಅಚ್ಚರಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?