newsics.com
ವಿಜಯಪುರ: ವಕ್ಫ್ ವಿರೋಧಿಸಿ ರೈತರು ಅಹೋರಾತ್ರಿ ಹೋರಾಟ ನಡೆಸಿದ್ದು, ಯಶಸ್ವಿಯಾಗಿ ಮುಂದುವರಿದಿದೆ.ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಎದುರೇ ಠಿಕಾಣಿ ಹೂಡಿರುವ ರೈತರು ರಾತ್ರಿಯಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆ ಮಾಡಿದ್ದರೆ, ವಿಜಯಪುರ ರೈತರು ಕರಾಳ ದೀಪಾವಳಿ ಆಚರಿಸುತ್ತಿದ್ದಾರೆ. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರೈತ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ ಅಹ್ಮದ್ ಬ್ಯಾನರ್‌ಗಳನ್ನು ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿಯೇ ಅಡುಗೆ, ಊಟ ಮಾಡಿ ಅಲ್ಲಿಯೇ ಮಲಗಿ ಅಹೋರಾತ್ರಿ ಅನಿರ್ದಿಷ್ಟ ಹೋರಾಟ ಪ್ರಾರಂಭಿಸಿದ್ದಾರೆ.