newsics.com
ಬೆಂಗಳೂರು: ವಕ್ಫ್ ಮಂಡಳಿ ನೋಟಿಸ್ ನಿಂದ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ ರೈತರು ಕಂಗೆಟ್ಟಿದ್ದಾರೆ. ಈ ಮಧ್ಯೆ ಮಂಡ್ಯ ಜಿಲ್ಲೆ ಬೆಳ್ಳೂರಿನಲ್ಲಿ ತಮ್ಮ ಹೆಸರಿಗೆ ಪಹಣಿ ಮಾಡಿಕೊಡುವಂತೆ ಜಾಮೀಯ ಮಸೀದಿ ವಕ್ಫ್ ಕಮಿಟಿಗೆ ಬೆಳ್ಳೂರು ಮುಸ್ಲಿಮರು ಪತ್ರ ಬರೆದಿದ್ದಾರೆ.
ಬೆಳ್ಳೂರು ಗ್ರಾಮದ ಸರ್ವೆ ನಂ. 472ರಲ್ಲಿ 20 ಎಕರೆ ಜಾಮೀಯ ಮಸೀದಿಗೆ, 34 ಎಕರೆ 12ಗುಂಟೆ ಸೂಫಿ ಸಂತರಿಗೆ, ಸರ್ವೆ ನಂ 73ರಲ್ಲಿ 6 ಎಕರೆ 6 ಗುಂಟೆ ಖಬರಸ್ಥಾನ್‌ಗೆ ಪಹಣಿ ಮಾಡಲು ಪತ್ರದಲ್ಲಿ ಮನವಿ ಮಾಡಲಾಗಿದೆ.
ಇನ್ನು 1921, 1932 ಹಾಗೂ 1940 ರಲ್ಲಿ ಮೈಸೂರು ಸರ್ಕಾರ ಮಸೀದಿ, ಖಬರಸ್ಥಾನ್ ಮತ್ತು ಸೂಫಿ ಸಂತರಿಗೆ ಜಮೀನು ನೀಡಿ ಆದೇಶಿಸಿದೆ. ಆ ಜಮೀನುಗಳ ಸ್ಕೆಚ್ ಕೂಡ ಆಗಿದೆ ಎಂದು ಆದೇಶ ಸಂಖ್ಯೆಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಪತ್ರದಲ್ಲಿ ಉಲ್ಲೇಖಿಸಿರುವ ಸರ್ವೆ ನಂ. 472ರಲ್ಲಿ 14.24 ಗುಂಟೆ ಗೋಮಾಳ ಇದ್ದು, 5ಕ್ಕೂ ಹೆಚ್ಚು ರೈತರಿಗೆ ಸೇರಿದ 19.88 ಗುಂಟೆ ಜಮೀನು ಆಗಿದೆ. ಗೋಮಾಳ ಹಾಗೂ ರೈತರ ಜಮೀನುಗಳನ್ನು ತಮ್ಮ ಹೆಸರಿಗೆ ಪಹಣಿ ಮಾಡಲು ಕ್ರಮ ವಹಿಸುವಂತೆ ಮುಸ್ಲಿಮರು ಮನವಿ ಮಾಡಿದ್ದಾರೆ.