newsics.com
ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.
ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ಪ್ರಸ್ತುತ ತಗ್ಗಿದೆ. ಆದರೆ ಮುಂದಿನ 5 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಅಕ್ಟೋಬರ್ 31 ರಿಂದ ನವೆಂಬರ್ 2 ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಅಂತೆಯೇ ಉತ್ತರ ಒಳನಾಡು ಜಿಲ್ಲೆಗಳಿಗೆ ನವೆಂಬರ್ 1 ಮತ್ತು ನವೆಂಬರ್ 2 ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ.